ಹುಬ್ಬಳ್ಳಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ವಿದ್ಯಾರ್ಥಿ ವೇತನ ಪಡೆದು ಶಿಕ್ಷಣ ಪೂರೈಸಿದವರೊಂದಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋತ್ ಅವರು ಸಂವಾದ ನಡೆಸಿದರು. ರಾಷ್ಟ್ರೀಯ ನಗರ ಜೀವನೋಪಾಯ ಮಿಷನ್ ಅಡಿ ಸಹಾಯಧನದ ಅಡಿ ಮಹಾನಗರಪಾಲಿಕೆ ನೀಡಿದ ಆಟೋಗಳನ್ನು ವಿತರಿಸಿದರು.
ನವನಗರದ ಕರ್ನಾಟಕ ರಾಜ್ಯ ಕಾನೂನು ವಿವಿ ಆವರಣದಲ್ಲಿ ಇಂದು ಸಂಜೆ ನಡೆದ ಸರಳ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ, ಅತಿವೃಷ್ಟಿಯಿಂದ ಮನೆಹಾನಿಗೀಡಾಗಿ ಸರ್ಕಾರದಿಂದ ಐದು ಲಕ್ಷ ರೂ.ಗಳ ನೆರವು ಪಡೆದು ಮನೆಗಳನ್ನು ಪುನರ್ ನಿರ್ಮಿಸಿಕೊಂಡ ಫಲಾನುಭವಿಗಳು,ವಿದ್ಯಾರ್ಥಿ ವೇತನದೊಂದಿಗೆ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳ ಅನಿಸಿಕೆಗಳನ್ನು ಆಲಿಸಿದ ರಾಜ್ಯಪಾಲರು, ಜನವರಿ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು.ಸ್ಥಳೀಯ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಅಗತ್ಯ ಸಹಕಾರ ಪಡೆಯಬೇಕು ಎಂದು ಸಲಹೆ ನೀಡಿದರು.
Kshetra Samachara
26/03/2022 09:04 pm