ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಎಫ್.ಎಂ.ಜಿ.ಸಿ. ಕ್ಲಸ್ಟರ್ ಸ್ಥಾಪನೆ ವಿಶೇಷ ಪ್ರೋತ್ಸಾಹ: ಬೊಮ್ಮಾಯಿ

ಹುಬ್ಬಳ್ಳಿ:‌ ಸ್ಟಾರ್ಟ್‌ಅಪ್ ಉದ್ದಿಮೆಗಳ ಸ್ಥಾಪನೆಯಲ್ಲಿ ರಾಜ್ಯ ಮಂಚೂಣಿಯಲ್ಲಿದೆ. ಕೈಗಾರಿಕೆ ಹಾಗೂ ಉದ್ದಿಮೆ ಸ್ಥಾಪನೆ ಮಾಡಲು ಹೆಚ್ಚಿನ ಸವಲತ್ತು ಹಾಗೂ ಸಹಾಯಧನವನ್ನು ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ನೀಡಲಾಗಿದೆ. ಮಹಿಳಾ ಉದ್ದಿಮೆದಾರರಿಗೆ ಆರ್ಥಿಕ ಸಹಾಯವನ್ನು ಘೋಷಿಸಲಾಗಿದೆ. ಹುಬ್ಬಳ್ಳಿ ನಗರದಲ್ಲಿ ಎಫ್.ಎಂ.ಜಿ.ಸಿ. ಕ್ಲಸ್ಟರ್ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿದ್ದು. ಒಂದು ಲಕ್ಷ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಆನ್ ಇವನಿಂಗ್ ವಿಥ್ ಲೆಜೆಂಡ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಯಾಂಡ್ ಬೆಂಗಳೂರು ಆಲೋಚನೆಗೆ ಒತ್ತು ನೀಡಿದ್ದು, ಬೆಂಗಳೂರು ಹೊರತಾಗಿ ರಾಜ್ಯದ ವಿವಿಧ ನಗರಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ. ಗುಜರಾತ್ ಮಾದರಿಯಲ್ಲಿ ವಿಶೇಷ ಹೂಡಿಕೆ ವಲಯವನ್ನು ಸ್ಥಾಪಿಸಿ, ರಿಯಾಯಿತಿಗಳನ್ನು ಸಹ ನೀಡಲಾಗಿದೆ. ಚೆನ್ನೈ ಬೆಂಗಳೂರು ಹಾಗೂ ಚಿತ್ರದುರ್ಗ ಹಾಗೂ ಬೆಳಗಾವಿ ನಡುವಿನ ರಾಷ್ಟ್ರೀಯ ಹೆದ್ದಾರಿಯ ಅಕ್ಕಪಕ್ಕದಲ್ಲಿ ಕೈಗಾರಿಕಾ ಟೌನ್‌ಶಿಪ್ ನಿರ್ಮಿಸಲಾಗುವುದು ಎಂದರು.

ಟೈ ಉತ್ತಮ ಕೆಲಸ ಮಾಡುತ್ತಿದೆ. ಯುವ ಉದ್ದಿಮೆದಾರರಿಗೆ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸುತ್ತದೆ. ಯುವಜನರು ಭವಿಷ್ಯದ ಬಗ್ಗೆ ಆಶಾದಾಯಕಾಗಿರಬೇಕು. ಆತ್ಮ ಸ್ಥೈರ್ಯ ಹೊಂದಬೇಕು. ಉದ್ದಿಮೆ ಸ್ಥಾಪಿಸಿ ತಮ್ಮ ಅಸ್ಮಿತೆಯನ್ನು ಕಂಡುಕೊಳ್ಳಬೇಕು. ವೈಯಕ್ತಿಕವಾಗಿ ಭಗವದ್ಗೀತೆಯನ್ನು ನಾನು ಓದುತ್ತೇನೆ. ನಮ್ಮ ಜೀವನದ ಎಲ್ಲಾ ಪ್ರಶ್ನೆಗಳಿಗೆ ಭಗವದ್ಗೀತೆ ಉತ್ತರ ನೀಡುತ್ತದೆ. ಅನುಭವ ಎಲ್ಲದಕ್ಕಿಂತ ದೊಡ್ಡದು. ನಮ್ಮ ಪ್ರಜ್ಞೆಗೆ ವಿರುದ್ಧ ಕೆಲಸ ಮಾಡಬಾರದು. ಪ್ರತಿ ಕೆಲಸ ಮಾಡುವಾಗ ಅಂತಃಸಾಕ್ಷಿ ಮಾತನ್ನು ಕೇಳಿ. ವಿಮರ್ಶೆ ಹಾಗೂ ವಿರೋಧಗಳಿಗೆ ಹೆದರದಿರಿ ಎಂದು ಯುವ ಉದ್ದಿಮೆದಾರರಿಗೆ ಕಿವಿಮಾತು ಹೇಳಿದರು.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

26/03/2022 10:41 pm

Cinque Terre

42.31 K

Cinque Terre

0

ಸಂಬಂಧಿತ ಸುದ್ದಿ