ಹುಬ್ಬಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪರೀಕ್ಷೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಿರಿ. ವಿದ್ಯಾರ್ಥಿಗಳು ಮುಂದಿನ ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಕ್ಕಳಿಗೆ ಧೈರ್ಯ ತುಂಬಿದರು.
ಹುಬ್ಬಳ್ಳಿಯಲ್ಲಿ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ತೀರ್ಪು ಬಂದಿದೆ. ತೀರ್ಪು ಬಂದ ನಂತರ ವಿವಾದಾತ್ಮಕ ಹೇಳಿಕೆ ನೀಡುವ ಅವಶ್ಯಕತೆ ಇಲ್ಲ. 30ರಂದು ಬಜೆಟ್ ಅಧಿವೇಶನ ಮುಗಿಯುತ್ತದೆ. ಎಲ್ಲವೂ ಅನುಷ್ಠಾನಕ್ಕೆ ಬರುವಂತೆ ಸೂಚನೆ ನೀಡಿದ್ದೇನೆ. ಹಣಕಾಸಿನ ನೆರವು ಆಗಬೇಕು ಎನ್ನುವ ನಿಟ್ಟಿನಲ್ಲಿ ಸಮಿತಿ ರಚನೆ ಆಗಿದೆ ಎಂದರು.
ಅಂತರಾಜ್ಯ ಜಲ ವಿವಾದ ಶೀಘ್ರದಲ್ಲೇ ಬಗೆಹರಿಯುತ್ತೆ. ಕಾನೂನಾತ್ಮಕ ರೀತಿಯಲ್ಲಿ ಕೆಲವು ನ್ಯಾಯಾಲಯಗಳಿಂದ ನಮಗೆ ಪರಿಹಾರ ಕಂಡುಕೊಳ್ಳಬೇಕಿದೆ. ಕೇಂದ್ರದಿಂದ ಸಹ ಹಲವು ಅನುಮತಿ ಗೆ ಸಿದ್ಧತೆ ಮಾಡಿಕೊಳ್ಳಲು ಹೇಳಿದ್ದೇನೆ. ಕೈಗಾರಿಕೆಯ ಕಾರ್ಯಗತ ಆಗಲು ಉತ್ತರ ಕರ್ನಾಟಕಕೆ ಹೆಚ್ಚಿನ ಮಹತ್ವ ಕೊಡುತ್ತಿದ್ದೇವೆ. ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಈಗಾಗಲೇ ಜಯದೇವ ಹೃದಯ ಸಂಸ್ಥೆ ತರುವ ನಿಟ್ಟಿನಲ್ಲಿ ಗೌರ್ನಿಂಗ್ ಕೌನ್ಸೆಲಿಂಗ್‌ನಲ್ಲಿ ಹೇಳಲಾಗಿದೆ. ಡಿಸಿ ಗೆ ಸಹ ಜಾಗದ ಬಗ್ಗೆ ಆದಷ್ಟು ಬೇಗ ಹುಡುಕಿ ಅಂತ ಹೇಳಿದ್ದೇನೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/03/2022 11:39 am