ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಂಜುನಾಥ ಜಾಧವ

ನವಲಗುಂದ : ನವಲಗುಂದ ಪುರಸಭೆ ಅಧ್ಯಕ್ಷ ಮಂಜುನಾಥ ಜಾಧವ ಅವರು ಸೋಮವಾರ ಧಾರವಾಡದ ಉಪ ವಿಭಾಗಾಧಿಕಾರಿಗಳ ಮೂಲಕ ಸ್ವಯಂ ಘೋಷಿತವಾಗಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಕಳೆದ ಒಂದು ವಾರದಿಂದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಮಂಜುನಾಥ ಜಾಧವ ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿ ವತಿಯಿಂದ ನವಲಗುಂದ ಪುರಸಭೆ ಎದುರು ಧರಣಿ ಪ್ರತಿಭಟನೆ ನಡೆಸಲಾಗುತ್ತಿತ್ತು.

ಇನ್ನು ಇಂದು ಮಂಜುನಾಥ ಜಾಧವ ಅವರ ನೇತೃತ್ವದಲ್ಲಿ ಸಭೆ ಕರೆದು ಈ ಬಗ್ಗೆ ಚರ್ಚಿಸಿ, ನಂತರ ಕಾಂಗ್ರೆಸ್ ಹಿರಿಯರ ಮಾರ್ಗದರ್ಶನದ ಮೇರೆಗೆ ರಾಜೀನಾಮೆ ನೀಡಿದ್ದೇನೆ. ಪ್ರತಿಭಟನೆಯಿಂದ ನಾವು ರಾಜೀನಾಮೆ ನೀಡಿಲ್ಲ. ನಮ್ಮ ನಿಲುವು ಮೊದಲಿನಂತೆ ಈಗ ಸಹ ಇದೆ ಎಂದು ಪಬ್ಲಿಕ್ ನೆಕ್ಸ್ಟ್ ಗೆ ಮಂಜುನಾಥ ಜಾಧವ ಅವರು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

28/03/2022 04:08 pm

Cinque Terre

8.81 K

Cinque Terre

0

ಸಂಬಂಧಿತ ಸುದ್ದಿ