ಕುಂದಗೋಳ : ಮಾಜಿ ಸಚಿವ ದಿ.ಶಿವಳ್ಳಿ ಸಾಹೇಬ್ರಂತೆ ನಾನು ಸಹ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲಿದ್ದೇನೆ ಕಳೆದೆರೆಡು ವರ್ಷಗಳಿಂದ ಕೋವಿಡ್ ಕಾರಣ ಅಭಿವೃದ್ಧಿ ಕುಂಠಿತವಾಗಿದೆ
ಇದೀಗ ಕೋವಿಡ್ ದೂರವಾಗಿ ಎಲ್ಲ ಅಭಿವೃದ್ಧಿ ಕಾರ್ಯಗಳು ಆರಂಭವಾಗಿವೆ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ ಮಟ್ಟದಿಂದ ಹೆಚ್ಚಿನ ಅನುದಾನ ತರುವೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಕುಂದಗೋಳ ತಾಲೂಕಿನ ಸಂಶಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ನೂತನ ಕೊಠಡಿಯ ಉದ್ಘಾಟನೆ ನೆರವೇರಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ನನ್ನ ಗುರಿ ಸಂಶಿ ಗ್ರಾಮಕ್ಕೆ ಹೆಚ್ಚಿನ ಅನುದಾನ, ಇನ್ನೆರಡು ಶಾಲಾ ಕೊಠಡಿ ನಿರ್ಮಾಣಕ್ಕೆ ಸಚಿವರ ಜೊತೆ ಮಾತನಾಡುತ್ತೇನೆ ಎಂದರು.
ಅದರಂತೆ ಕುಂದಗೋಳ ತಾಲೂಕಿನ ಬು.ತರ್ಲಘಟ್ಟ ಗ್ರಾಮದಲ್ಲಿ 48 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ಪಾಳೆ ಗ್ರಾಮದಲ್ಲಿ 30 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು
Kshetra Samachara
29/03/2022 02:35 pm