ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡದಲ್ಲಿ ವಿವಿಧ ಕಾರ್ಮಿಕರಿಂದ ಬೃಹತ್ ಪ್ರತಿಭಟನೆ

ಧಾರವಾಡ: ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಧಾರವಾಡ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿವಿಧ ವಿಭಾಗದ ಕಾರ್ಮಿಕರು, ನೌಕರರಿಂದ ಧಾರವಾಡದಲ್ಲಿ ಮಂಗಳವಾರ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು.

ಕಡಪಾ ಮೈದಾನದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಕೈಗೊಂಡು, ಡಿಸಿ ಕಚೇರಿ ಎದುರು ಪ್ರತಿಭಟನಾ ಧರಣಿಯ ಮೂಲಕ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಲಾಯಿತು.

ಜಿಲ್ಲಾಡಳಿತದ ಮೂಲಕ ರಾಜ್ಯ, ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಸಲ್ಲಿಸಲಾಯಿತು.

ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಅಗತ್ಯ ವಸ್ತುಗಳ ಬೆಲೆಗಳನ್ನು ನಿಯಂತ್ರಿಸಬೇಕು. ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಕೇಂದ್ರೀಯ ಅಬಕಾರಿ ತೆರಿಗೆಯನ್ನು ಕಡಿಮೆ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ 7,500 ನೇರ ನಗದು ವರ್ಗಾವಣೆ ಮಾಡಬೇಕು, ಪ್ರತಿ ವ್ಯಕ್ತಿಗೂ ತಲಾ 10 ಕೆಜಿ ಆಹಾರ ಧಾನ್ಯಗಳನ್ನು ನೀಡಬೇಕು. ಕಾರ್ಪೊರೇಟ್ ಬಂಡವಾಳಪರ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ಕಾರ್ಮಿಕರ ಹಕ್ಕುಗಳನ್ನು ಉಳಿಸಬೇಕು ಎಂದು ಆಗ್ರಹಿಸಲಾಯಿತು.

ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳ ಜತೆಗೆ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ವಾಪಸ್ಸು ಪಡೆಯಬೇಕು. ಶಾಸನಬದ್ಧ ಬೆಂಬಲ ಬೆಲೆ ಕಾಯ್ದೆ ರೂಪಿಸಬೇಕು. ರಾಜ್ಯ ಸರ್ಕಾರ ಸಹ ರೈತ ವಿರೋಧಿ, ಜನವಿರೋಧಿ ಎಪಿಎಂಸಿ, ಭೂ ಸುಧಾರಣಾ ಮುಂತಾದ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ಸು ಪಡೆಯಬೇಕು. ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಿಸಬೇಕು. ಅಸಂಘಟಿತ ಕಾರ್ಮಿಕರಿಗೆ ಸಾರ್ವತ್ರಿಕ ಸಾಮಾಜಿಕ ಭದ್ರತೆ ಒದಗಿಸಬೇಕು. ಕೋವಿಡ್ ಲಾಕಡೌನ್ ಸಂಕಷ್ಟಕ್ಕೆ ಒಳಗಾದ ಅಸಂಘಟಿತರಿಗೆ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.

Edited By : Manjunath H D
Kshetra Samachara

Kshetra Samachara

29/03/2022 09:05 pm

Cinque Terre

18.24 K

Cinque Terre

0

ಸಂಬಂಧಿತ ಸುದ್ದಿ