ಹುಬ್ಬಳ್ಳಿ: ನವಲಗುಂದ ಪುರಸಭೆಯಲ್ಲಿ ಬಿಜೆಪಿಯೊಂದಿಗೆ ಕಾಂಗ್ರೆಸ್ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಕಾಂಗ್ರೆಸ್ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ ಪಾಟೀಲ್ ಸ್ಪಷ್ಟಪಡಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಎಂತಹ ಪರಿಸ್ಥಿತಿ ಎದುರಾದರೂ ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಕೈ ಜೋಡಿಸುವುದಿಲ್ಲ. ನವಲಗುಂದ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿಯೇ ಬಿಜೆಪಿಯವರೇ ಕಾಂಗ್ರೆಸ್ ಅಭ್ಯರ್ಥಿಗೆ ಮತಚಲಾಯಿಸಿದ್ದಾರೆ. ಆ ಸಂದರ್ಭದಲ್ಲಿ ಯಾವುದೇ ಒಪ್ಪಂದ ಮಾಡಿಕೊಂಡಿರಲಿಲ್ಲ. ಇದೀಗ 17 ಸದಸ್ಯರ ಬಹುಮತ ಕಾಂಗ್ರೆಸ್ ಗೆ ಇದ್ದು, ನಮ್ಮ ಪಕ್ಷದ ಅಭ್ಯರ್ಥಿಯೊಬ್ಬರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಲಿದ್ದಾರೆ ಎಂದರು.
ಇನ್ನು ಈ ಹಿಂದೆ ಕಾಂಗ್ರೆಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದರೇ ಆಗಲೇ ಧ್ವನಿ ಎತ್ತಬೇಕಿತ್ತು. ಆದರೆ ಜೆಡಿಎಸ್ ನವರು ಅಧಿಕಾರಕ್ಕೆ ಬರಬಾರದೆಂದು ನಮಗೆ ಬೆಂಬಲ ನೀಡಿದ್ದಾರೆ ಹೊರತು ನಮ್ಮ ಪಕ್ಷದ ಯಾವುದೇ ಸದಸ್ಯರು ಬಿಜೆಪಿಯೊಂದಿಗೆ ಕೈಜೋಡಿಸಿಲ್ಲ. ಹಾಗಾಗಿ ಇದೀಗ ಅವರೊಂದಿಗೆ ಕೈಜೋಡಿಸಿದರೇ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
Kshetra Samachara
01/04/2022 03:10 pm