ಹುಬ್ಬಳ್ಳಿ: ಅಭಿವೃದ್ಧಿ ವಿಚಾರದಲ್ಲಿ ಸಹಕಾರ ಇಲ್ಲವೆಂದು ಹಳ್ಯಾಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸದಸ್ಯರು ನಡೆಸಿದ ಧರಣಿ ಗುರುವಾರ ಸಾಯಂಕಾಲ ಸುಖಾಂತ್ಯ ಕಂಡಿದೆ.
ಹಳ್ಯಾಳ ಗ್ರಾಮ ಪಂಚಾಯಿತಿ ಅಧ್ಯಕ್ಷರು ಅನಾರೋಗ್ಯದ ವಿಶ್ರಾಂತಿಯಲ್ಲಿರುವ ಕಾರಣ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದವು. ಇದೀಗ ಗ್ರಾಪಂ ಸದಸ್ಯರ ಧರಣಿ ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಅಧ್ಯಕ್ಷರು ಆಗಮಿಸಿ ಅಭಿವೃದ್ಧಿ ಕಾರ್ಯಕ್ಕೆ ಸಹಕಾರ ನೀಡುವ ಭರವಸೆ ವ್ಯಕ್ತಪಡಿಸಿದರು.
ಅದರಂತೆ ಈಗಾಗಲೇ ತಮ್ಮ ಅಧ್ಯಕ್ಷತೆಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳ ವರದಿ ಸಹ ತೋರಿಸಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಸಂಪೂರ್ಣ ವಿಶ್ವಾಸ ನೀಡುವ ಭರವಸೆ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ತಾಪಂ ಅಭಿವೃದ್ಧಿ ಅಧಿಕಾರಿಗಳು, ಸರ್ವ ಗ್ರಾಪಂ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
Kshetra Samachara
01/04/2022 07:48 pm