ಧಾರವಾಡ: ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮೀತ್ ಶಾ ಅವರನ್ನು ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಭೇಟಿಯಾಗಿ ಮಾತುಕತೆ ನಡೆಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನವನ್ನು ಮೂಡಿಸಿದೆ.
ಏಕಾಏಕಿ ಶಾಸಕ ಬೆಲ್ಲದ ಅವರು, ಬಿಜೆಪಿ ಪಕ್ಷದ ಚಾಣುಕ್ಯ ಎಂದೇ ಹೆಸರಾದ ಅಮೀತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಉಂಟುಮಾಡಿದೆ.
ಈಗಾಗಲೇ ಪಂಚ ರಾಜ್ಯಗಳ ಚುನಾವಣೆ ಮುಗಿದಿರುವುದರಿಂದ ಕರ್ನಾಟಕ ರಾಜ್ಯದ ಸಚಿವ ಸಂಪುಟ ಪುನಾರಚನೆಯ ಹಾದಿ ಸುಗಮವಾಗಿದ್ದು ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನ ಹಾಗೂ ಪ್ರಮುಖ ಹುದ್ದೆ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದಾಗ ಸಿಎಂ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿ ಬೆಲ್ಲದ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿತ್ತು. ಅಷ್ಟೇ ಅಲ್ಲದೇ ತಾವು ಸಿಎಂ ಅಭ್ಯರ್ಥಿ ಎನ್ನುವಂತೆ ದೆಹಲಿ ಮಟ್ಟದಲ್ಲಿ ರಾಜಕೀಯ ದಾಳ ಬೀಸಿದ್ದು ಈಗ ಗುಟ್ಟಾಗಿ ಉಳಿದಿಲ್ಲ.
Kshetra Samachara
01/04/2022 10:07 pm