ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ಸರ್ಕಾರದ ವಿರುದ್ಧ ರೊಚ್ಚಿಗೆದ್ದ ಎಸ್‌ಡಿಪಿಐ

ಹುಬ್ಬಳ್ಳಿ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅರಾಜಕತೆ ಸೃಷ್ಟಿ ಮಾಡಿದೆ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ, ಹಲಾಲ್ ಮಾಂಸದ ಬಹಿಷ್ಕಾರ, ಇದರಲ್ಲೂ ಸರ್ಕಾರದ ಕೈವಾಡವಿದೆ ಎಂದು ಆರೋಪಿಸಿದರು.

ಸರ್ಕಾರಿ ಶಾಲೆಗಳಲ್ಲಿ ಭಗವದ್ಗೀತೆ ಹೇರುವ ಹುನ್ನಾರ ಮಾಡಿದ್ದು,ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ಕೊಲೆಯಾದ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಟಿಪ್ಪುಸುಲ್ತಾನ್ ಸಾಧನೆಗಳನ್ನು ಪಠ್ಯ ಪುಸ್ತಕದಿಂದ ಕೈಬಿಡುವ ಹುನ್ನಾರವನ್ನು ಸರಕಾರ ಮಾಡುತ್ತಿದೆ ಎಂದು ಆರೋಪಿಸಿ ಆಕ್ರೋಶಗೊಂಡರು.

Edited By : Shivu K
Kshetra Samachara

Kshetra Samachara

02/04/2022 02:29 pm

Cinque Terre

16.91 K

Cinque Terre

25

ಸಂಬಂಧಿತ ಸುದ್ದಿ