ಹುಬ್ಬಳ್ಳಿ : ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲಾಗುವುದು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದರು.
ಇಲ್ಲಿ ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ನಮ್ಮ ಪಕ್ಷದಿಂದಲೇ ಸ್ಪರ್ಧಿಸುವಂತೆ ಬಿಜೆಪಿ ನಾಯಕರು ಹೇಳಿದ್ದಾರೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.
ನಿಮ್ಮ ಸ್ಪರ್ಧೆಗೆ ಬಿಜೆಪಿಯ ಕೆಲವರಿಂದ ವಿರೋಧವಿದೆಯಲ್ಲ ಎನ್ನುವ ಪ್ರಶ್ನೆಗೆ 'ಯಾರು ವಿರೋಧ ಮಾಡುತ್ತಿದ್ದಾರೆ ಅದು ನನಗೆ ಬೇಕಾಗಿಲ್ಲ. ಶನಿವಾರ ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ ಎಂದರು.
ಬಿಜೆಪಿಯಿಂದ ಸ್ಪರ್ಧೆಗೆ ಎಚ್.ಡಿ. ಕುಮಾರಸ್ವಾಮಿ ಅವರು ಮುಕ್ತವಾಗಿ ಒಪ್ಪಿದ್ದಾರೆ. ಬಿಜೆಪಿ ಸೇರ್ಪಡೆಗೆ ಕರ್ನಾಟಕದ ಎಲ್ಲಾ ನಾಯಕರು ಒಪ್ಪಿದ್ದಾರೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
03/04/2022 03:15 pm