ಧಾರವಾಡ: ವಿವಿಧ ಬೇಡಿಕೆಗಳನ್ನು ಈಡೇರಿಸಿಕೊಳ್ಳುತ್ತ ಬಂದಿರುವ ಟಾಟಾ ಮಾರ್ಕೊಪೊಲೊ ಕಂಪೆನಿ ಉದ್ಯೋಗಿಗಳು ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಒಂದು ವಾರದಿಂದ ಧರಣಿ ನಡೆಸುತ್ತಿದ್ದಾರೆ.
ಸದ್ಯ ಟಾಟಾ ಮಾರ್ಕೊಪೋಲೊ ಕಾರ್ಮಿಕರ ಧರಣಿಯನ್ನು ಬೆಂಬಲಿಸಿ, ವಿನಯ ಕುಲಕರ್ಣಿ ಅಭಿಮಾನಿ ಬಳಗ ಹಾಗೂ ಧಾರವಾಡ ತಾಲೂಕ ಗ್ರಾಮೀಣ ಕಾಂಗ್ರೆಸ್ ಪಕ್ಷ ಬೆಂಬಲ ಸೂಚಿಸಿದರು.
ಹೌದು! ಕಳೆದ ಎರಡು ವರ್ಷಗಳಿಂದ ವೇತನ ಪರಿಷ್ಕರಣೆಯನ್ನೇ ಮಾಡದೇ ಬಾಕಿ ಇರಿಸಿಕೊಳ್ಳಲಾಗಿದೆ. ಹಾಲಿ ಕಾರ್ಮಿಕರ ವೇತನವನ್ನು 23 ಸಾವಿರದಿಂದ 50 ಸಾವಿರಕ್ಕೆ ಹೆಚ್ಚಳ ಮಾಡಬೇಕು, ಕಾರ್ಮಿಕರ ಎಲ್ಲಾ ಸೌಲಭ್ಯದ ಭತ್ಯೆಗಳನ್ನು ಎರಡುಪಟ್ಟು ಹೆಚ್ಚಿಸಬೇಕು ಎಂದು ಆಗ್ರಹಿಸಿ ಇದೀಗ ಕಾರ್ಮಿಕರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.
Kshetra Samachara
03/04/2022 03:55 pm