ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂಬರ 59ರಲ್ಲಿ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲ. ಪಾಲಿಕೆ ಆಯುಕ್ತರಿಗೆ ಕಾಮಗಾರಿ ಆರಂಭಿಸಿ ಎಂದು ಹಲವಾರು ಬಾರಿ ಪಾಲಿಕೆ ಸದಸ್ಯೆ ಸುವರ್ಣಾ ಕಲ್ಲಕುಂಟಲಾ ಮನವಿ ಮಾಡಿದರೂ ಸ್ಪಂದಿಸದ ಕಾರಣ ಇಂದು ಪಾಲಿಕೆ ಎದುರಿಗೆ ವಾರ್ಡ್ ನಿವಾಸಿಗಳ ಸಮೇತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಸತ್ಯಾಗ್ರಹದ ನಂತರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಗುತ್ತದೆ. ಕೂಡಲೇ ಮೂಲಭೂತ ಸೌಕರ್ಯಗಳನ್ನು ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
Kshetra Samachara
04/04/2022 12:56 pm