ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಸಾಮಾನ್ಯ ಸಭೆಗೆ ಬಿಜೆಪಿ ಸದಸ್ಯರ ಅಡ್ಡಿ, ಕಾಂಗ್ರೆಸ್, ಬಿಜೆಪಿ ಸದಸ್ಯರ ನಡುವೆ ವಾಗ್ವಾದ

ನವಲಗುಂದ : ಸೋಮವಾರ ನವಲಗುಂದ ಪುರಸಭೆಯಲ್ಲಿ ನಡೆಯುತ್ತಿದ್ದ ಸಾಮಾನ್ಯ ಸಭೆಗೆ ಬಿಜೆಪಿ ಸದಸ್ಯರು ಅಡ್ಡಿಪಡಿಸಿ, ನಮ್ಮ ಬೆಂಬಲದಿಂದ ಚುನಾಯಿತರಾಗಿರುವ ಉಪಾಧ್ಯಕ್ಷರು ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ಬಲು ಜೋರಾಗಿಯೇ ಮಾತಿನ ಚಕಮಕಿ ನಡೆಯಿತು.

ಸಭೆಗೆ ಅಡ್ಡಿ ಪಡಿಸಿದ ಬಿಜೆಪಿ ಸದಸ್ಯರು ಆಡಳಿತ ಪಕ್ಷದ ಸದಸ್ಯರು ಯಾರು ಎಂದು ಸ್ಪಷ್ಟಪಡಿಸುವಂತೆ ಒತ್ತಾಯಿಸಿದರು. ಉಪಾಧ್ಯಕ್ಷರು ರಾಜೀನಾಮೆ ನೀಡಿ, ನಂತರ ಅಧಿಕೃತವಾಗಿ ಮತದಾನ ಮಾಡಿ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಮಾಡಿದ ನಂತರ ಸಾಮಾನ್ಯ ಸಭೆ ನಡೆಸಿ ಎಂದು ಬಿಜೆಪಿ ಸದಸ್ಯರು ಪಟ್ಟು ಹಿಡಿದು ಸಭೆಯಲ್ಲಿಯೇ ಪ್ರತಿಭಟನೆಗೆ ಕುಳಿತರು.

17 ಸದಸ್ಯರ ಬೆಂಬಲವಿದ್ದು ಕೋರಂ ಭರ್ತಿಯಾಗಿದೆ. ನಾವು ಸಾಮಾನ್ಯ ಸಭೆಯನ್ನು ನಡೆಸಿಯೇ ತಿರುತ್ತೇವೆ. ಸಭೆಯಲ್ಲಿ ಗದ್ದಲ ಮಾಡುತ್ತಿರುವ ಬಿಜೆಪಿ ಸದಸ್ಯರನ್ನು ಹೊರ ಹಾಕುವಂತೆ ಕಾಂಗ್ರೆಸ್ ಸದಸ್ಯರು ಮುಖ್ಯಾಧಿಕಾರಿ ವೀರಪ್ಪ ಹಸಬಿಯವರೊಂದಿಗೆ ವಾಗ್ವಾದ ನಡೆಸಿದರು.

Edited By :
Kshetra Samachara

Kshetra Samachara

04/04/2022 02:00 pm

Cinque Terre

31.38 K

Cinque Terre

0

ಸಂಬಂಧಿತ ಸುದ್ದಿ