ಧಾರವಾಡ: ಧಾರವಾಡ ಜಿಲ್ಲಾ ಸಹಕಾರಿ ಹಾಲು ಒಕ್ಕೂಟಗಳು ಅತ್ಯಂತ ಕಾರ್ಯಕ್ಷಮತೆಯಿಂದ ಕರ್ತವ್ಯವನ್ನು ನಿರ್ವಹಿಸುತ್ತಿವೆ ಅವುಗಳ ಬಲವರ್ಧನೆಗೆ ಕ್ರಮವಹಿಸಲಾಗುವುದು ಎಂದು ಸಹಕಾರ ಸಚಿವ ಎಸ್. ಟಿ.ಸೋಮಶೇಖರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಧಾರವಾಡ ಹಾಲು ಒಕ್ಕೂಟಕ್ಕೆ ಇಂದು ಭೇಟಿ ನೀಡಿ ಅವರು ಮಾತನಾಡಿದರು.
ಇದುವರೆಗೆ 10 ಹಾಲು ಒಕ್ಕೂಟಗಳಿಗೆ ಭೇಟಿ ನೀಡಿ ಉತ್ಪನ್ನಗಳನ್ನು ಪರಿಶೀಲಿಸಲಾಗಿದೆ. ಎಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ಉತ್ಪನ್ನಗಳು ತಯಾರಾಗುತ್ತಿವೆ. ಧಾರವಾಡ ಹಾಲು ಒಕ್ಕೂಟ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಹೆಚ್ಚಿನ ರೀತಿಯಲ್ಲಿ ಸಹಕಾರಿ ಹಾಲು ಒಕ್ಕೂಟಗಳನ್ನು ಬೆಳೆಸಲು ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ಕೃಷಿ ಸಚಿವ ಬಿ.ಸಿ.ಪಾಟೀಲ ಕೂಡ ಹಾಲು ಒಕ್ಕೂಟಕ್ಕೆ ಭೇಟಿ ನೀಡಿದ್ದರು. ಕರ್ನಾಟಕ ಹಾಲು ಮಹಾಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಶಂಕರ ಮುಗದ, ಧಾರವಾಡ ಹಾಲು ಒಕ್ಕೂಟದ ನಿರ್ದೇಶಕರಾದ ಎಸ್. ಜಿ. ಹಿರೇಗೌಡರ, ನೀಲಕಂಠಪ್ಪ ಅಸೂಟಿ, ಹನುಮಂತಗೌಡ ಹಿರೇಗೌಡರ, ಸುರೇಶ್ಚಂದ್ರ ಹೆಗಡೆ, ಹನುಮಂತಗೌಡ ಭರಮಣ್ಣವರ, ಮಂಜುನಾಥಗೌಡ ಪಾಟೀಲ, ಚನ್ನು ಪಾಟೀಲ, ಬಿ.ಎಸ್. ಮೇಲಿನಮನಿ,ವ್ಯವಸ್ಥಾಪಕ ನಿರ್ದೇಶಕ ಲೋಹಿತೇಶ್ವರ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
06/04/2022 08:01 am