ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಸೂರಿಲ್ಲದವರಿಗೆ ಮನೆ ನಿರ್ಮಾಣಕ್ಕೆ ಹಕ್ಕು ಪತ್ರ ವಿತರಣೆ

ಕುಂದಗೋಳ : ಕರ್ನಾಟಕ ಸರ್ಕಾರ ಕೊಳಚೆ ಅಭಿವೃದ್ಧಿ ಮಂಡಳಿ ಯೋಜನೆಯಡಿ ಬಡವರಿಗೆ ಸರಿಯಾದ ಸೂರು ನಿರ್ಮಿಸಿಕೊಳ್ಳಲು ಈಗಾಗಲೇ ಹಕ್ಕು ಪತ್ರ ವಿತರಣೆ ಮಾಡುತ್ತಿದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.

ಕುಂದಗೋಳ ಪಟ್ಟಣದ ಅಂಬ್ಕೇಡರ್ ಕಾಲೋನಿ ಜನರಿಗೆ ಕೊಳಚೆ ಅಭಿವೃದ್ಧಿ ಮಂಡಳಿ ಯೋಜನೆಯಲ್ಲಿ ಮಂಜೂರಾದ ಮನೆ ನಿರ್ಮಾಣಕ್ಕೆ ಹಕ್ಕು ಪತ್ರ ವಿತರಣೆ ಮಾಡುತ್ತಿದೆ. ಈ ಪ್ರಯೋಜನವನ್ನು ಸೂರಿಲ್ಲದವರು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಬಳಿಕ ಈಗಾಗಲೇ ಮನೆ ಮಂಜೂರಾದ ಫಲಾನುಭವಿಗಳಿಗೆ ಮನೆಯ ಹಕ್ಕು ಪತ್ರ ವಿತರಿಸಿದ ಶಾಸಕಿ ಕುಸುಮಾವತಿ ಶಿವಳ್ಳಿ ಸನ್ಮಾನಕ್ಕೆ ಭಾಜನರಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅರವಿಂದ್ ಕಟಗಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾರಾಯಣ್ ಡೊಂಬರ್, ನಗರ ಘಟಕದ ಅಧ್ಯಕ್ಷ ಸುರೇಶ್ ಗಂಗಾಯಿ, ಪಟ್ಟಣ ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

08/04/2022 04:06 pm

Cinque Terre

27.92 K

Cinque Terre

0

ಸಂಬಂಧಿತ ಸುದ್ದಿ