ಹುಬ್ಬಳ್ಳಿ: ಬೆಂಗಳೂರಿನ ಚಂದ್ರು ಹತ್ಯೆ ಕೇಸ್ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಕೋಮು ಗಲಭೆಯ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಎಪ್ರಿಲ್ 6ರಂದು ಬೆಂಗಳೂರಿನ ಜೆ.ಜೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಂದ್ರು ಎಂಬ ಯುವಕನ ಹತ್ಯೆಯಾಗಿತ್ತು. ಘಟನೆ ನಂತರ ಪೊಲೀಸ್ ಆಯುಕ್ತರೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೈಕ್ ಅಪಘಾತದಿಂದ ಉಂಟಾದ ಜಗಳವೇ ಹತ್ಯೆಗೆ ಕಾರಣವೆಂದು ತಿಳಿಸಿದರೂ ಕೂಡ ಗೃಹ ಸಚಿವ ಅರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉರ್ದು ಮಾತನಾಡಲು ಬರದಿದ್ದಕ್ಕೆ ಅಮಾನುಷವಾಗಿ ಕೊಲೆ ಮಾಡಲಾಗಿದೆ. ಕೇವಲ ಕನ್ನಡ ಮಾತನಾಡಿದ ಎಂಬ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಶಾಂತಿ ನಿರ್ಮಾಣಕ್ಕೆ ಪ್ರಚೋದನೆ ನೀಡಿದ್ದಾರೆ. ಇದು ಖಂಡನೀಯ ಕೂಡಲೇ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಮುಖಂಡರ ಮೇಲೆ ಎಫ್.ಆರ್.ಐ ದಾಖಲಿಸಬೇಕೆಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ಸಿಗರು ಒತ್ತಾಯಿಸಿದರು.
Kshetra Samachara
09/04/2022 10:04 pm