ಧಾರವಾಡ: ಧಾರವಾಡದ ಪ್ರತಿಷ್ಠಿತ ನುಗ್ಗಿಕೇರಿ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬಾರದು ಎಂದು ಹಿಂದೂಪರ ಸಂಘಟನೆ ಕಾರ್ಯಕರ್ತರು ಕಳೆದ ಶನಿವಾರ ನಬಿಸಾಬ್ ಎನ್ನುವವರ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಗ್ರಾಮೀಣ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು, ದೂರು ದಾಖಲಿಸಿಕೊಂಡಿದ್ದಾರೆ.
ಮೈಲಾರಪ್ಪ ಗುಡ್ಡಪ್ಪನವರ, ಮಹಾನಿಂಗ ಐಗಳಿ, ಚಿಂದಾನಂದ ಕಲಾಲ ಹಾಗೂ ಕುಮಾರ ಕಟ್ಟಿಮನಿ ಎಂಬುವವರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ.
ಆರೋಪಿಗಳ ಮೇಲೆ ಕಲಂ 143, 147, 298, 427, 504, 506 ಸಹ ಕಲಂ 149ನೇದ್ದರ ಅಡಿ ದೂರು ದಾಖಲಿಸಿಕೊಳ್ಳಲಾಗಿದೆ.
Kshetra Samachara
11/04/2022 11:03 am