ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪುರಸಭೆಯ ಅಧ್ಯಕ್ಷ ಸ್ಥಾನಕ್ಕಾಗಿ ಮುಂದುವರಿದ ಧರಣಿ

ಅಣ್ಣಿಗೇರಿ: ಪುರಸಭೆಯ ಅಧ್ಯಕ್ಷ ಸ್ಥಾನವನ್ನು ಇಲ್ಲಿವರೆಗೆ ಪರಿಶಿಷ್ಟ ಜಾತಿಯ ಮಹಿಳೆಗೆ ನೀಡಿಲ್ಲ. ಆದ್ದರಿಂದ ಈ ಬಾರಿ ಅಧ್ಯಕ್ಷ ಸ್ಥಾನವನ್ನು ಪರಿಶಿಷ್ಟ ಜಾತಿಯ ಮಹಿಳೆಗೆ ಅಧ್ಯಕ್ಷ ಸ್ಥಾನ ನೀಡಬೇಕೆಂದು ಒತ್ತಾಯಿಸಿ ವಿವಿಧ ದಲಿತ ಪರ ಸಂಘಟನೆಗಳು ನಿನ್ನೆ ರಾತ್ರಿಯಿಂದ ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ರಾತ್ರಿ ತಹಶೀಲ್ದಾರ್ ಮಂಜುನಾಥ್ ಅಮಾಸೆ ಅವರು ಧರಣಿ ನಿರತರನ್ನು ಧರಣಿ ಕೈಬಿಡುವಂತೆ ಮನವೊಲಿಸಲು ಪ್ರಯತ್ನಪಟ್ಟರು. ಆದರೆ ಇದ್ಯಾವುದಕ್ಕೂ ಜಗ್ಗದ ದಲಿತ ಮುಖಂಡರು ಜಿಲ್ಲಾಧಿಕಾರಿಗಳು ಹಾಗೂ ಚುನಾವಣೆ ಆಯುಕ್ತರು ಬರುವವರೆಗೆ ನಿಲ್ಲುವುದಿಲ್ಲ ಎಂದು ಘೋಷಣೆಗಳನ್ನು ಕೂಗುತ್ತಾ ತಮ್ಮ ಅಹೋರಾತ್ರಿ ಧರಣಿಯನ್ನು ಮುಂದುವರಿಸಿದರು.

Edited By : Shivu K
Kshetra Samachara

Kshetra Samachara

13/04/2022 10:51 am

Cinque Terre

20.8 K

Cinque Terre

0

ಸಂಬಂಧಿತ ಸುದ್ದಿ