ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 'ಕೊಲೆಗಡುಕ ಸಚಿವ ಈಶ್ವರಪ್ಪರನ್ನು ಬಂಧಿಸಿ'

ಹುಬ್ಬಳ್ಳಿ: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು. ಅಷ್ಟೇ ಅಲ್ಲದೆ ರಾಜೀನಾಮೆ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿ ಹುಬ್ಬಳ್ಳಿಯ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪಾಲಿಕೆ ಸದಸ್ಯ ಇಮ್ರಾನ್ ಯಲಿಗಾರ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಮೆರವಣಿಗೆ ಮೂಲಕ ತಹಶೀಲ್ದಾರರ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ತಹಶೀಲ್ದಾರರ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಭ್ರಷ್ಟ ಹಾಗೂ ಕೊಲೆಗಡುಕ ಸಚಿವ ಈಶ್ವರಪ್ಪ ಅವರನ್ನು ಬಂಧಿಸಿ ಸಂತೋಷ್ ಪಾಟೀಲ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

=====

Edited By : Manjunath H D
Kshetra Samachara

Kshetra Samachara

13/04/2022 02:15 pm

Cinque Terre

16.15 K

Cinque Terre

19

ಸಂಬಂಧಿತ ಸುದ್ದಿ