ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ರಸ್ತೆ ಅಭಿವೃದ್ಧಿಗಾಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಗ್ರಾಮಸ್ಥರ ಮನವಿ

ಕುಂದಗೋಳ : ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಯರಿನಾರಾಯಣಪೂರ ಗುಡೇನಕಟ್ಟಿ ಸರಕಾರಿ ರಸ್ತೆ ಅಭಿವೃದ್ಧಿ ಕಾಣದೆ ಮುಳ್ಳು ಕಂಟಿ ಬೆಳೆದು ಹಾಳಾಗಿ ಹೋಗಿದ್ದು ಯರಿನಾರಾಯಣಪುರ ಗ್ರಾಮಸ್ಥರು ಗುಡೇನಕಟ್ಟಿ ಪಂಚಾಯಿತಿಗೆ ಬರಲು ಬರಲು ಇದೇ ರಸ್ತೆಯನ್ನೇ ಅವಲಂಬಿಸಿದ್ದಾರೆ ಶೀಘ್ರ ರಸ್ತೆ ಡಾಂಬರೀಕರಣ ಕಾರ್ಯ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರವರಿಗೆ ಗಡೇನಕಟ್ಟಿ ಗ್ರಾಮಸ್ಥರು ಮನವಿ ಸಲ್ಲಿಸಿದರು.

ಈ ಮನವಿ ಓದಿದ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಕೂಡಲೇ ಈ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬಸುರಾಜ ಕಮಲದಿನ್ನಿ, ಸಂತೋಷ ಬೆಡತೂರ, ಬಸವರಾಜ ಯೋಗಪ್ಪನವರ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

13/04/2022 03:53 pm

Cinque Terre

8.4 K

Cinque Terre

1

ಸಂಬಂಧಿತ ಸುದ್ದಿ