ಹುಬ್ಬಳ್ಳಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹೊಣೆಹೊತ್ತು ಕೆ.ಎಸ್.ಈಶ್ವರಪ್ಪ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸಿಮರದ ಕಿಡಿ ಕಾರಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ ಪಾಟೀಲ್ ಸಾವು ಅನ್ಯಾಯದ ಸಾವಾಗಿದೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರೇ ಸಾವನ್ನಪ್ಪುತ್ತಿದ್ದಾರೆ. ರಾಜ್ಯದಲ್ಲಿ 40% ಕಮಿಷನ್ ದಂಧೆ ನಡೆದಿರುವುದು ಸತ್ಯ. ಎಲ್ಲ ಶಾಸಕರು, ಸಚಿವರು ಇದೇ ದಂಧೆ ನಡೆಸಿದ್ದಾರೆ. ದೇಶದ ಪ್ರಧಾನಿಗಳು ಮಾನ ಮರ್ಯಾದೆ ಇದ್ದರೇ ಆ ಸರ್ಕಾರ ಭ್ರಷ್ಟ, ಈ ಸರ್ಕಾರ ಭ್ರಷ್ಟ ಎಂದು ಹೇಳುವ ಬದಲು ತಮ್ಮದೇ ಸರ್ಕಾರದವರೇ ಭ್ರಷ್ಟಾಚಾರ ಮಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಭ್ರಷ್ಟಾಚಾರದ ಆರೋಪ ಹೊತ್ತಿರುವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
Kshetra Samachara
13/04/2022 05:14 pm