ಧಾರವಾಡ: ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಘನತೆ, ಗೌರವ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಗುತ್ತಿಗೆದಾರ ತನಗೆ ಆಗಿರುವ ಅನ್ಯಾಯದ ಬಗ್ಗೆ ಈಶ್ವರಪ್ಪನವರ ಹೆಸರನ್ನು ಉಲ್ಲೇಖ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಹಿಂದೆ ಇದೇ ರೀತಿ ಪೊಲೀಸ್ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ಇದೇ ಈಶ್ವರಪ್ಪನವರು ಕೆ.ಜೆ.ಜಾರ್ಜ್ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಇದೀಗ ಈಶ್ವರಪ್ಪನವರಿಗೂ ಅದೇ ಪರಿಸ್ಥಿತಿ ಬಂದಿದೆ. ಆದ್ದರಿಂದ ಈಶ್ವರಪ್ಪನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದರು.
Kshetra Samachara
14/04/2022 03:52 pm