ಹುಬ್ಬಳ್ಳಿ: ಕೆ.ಎಸ್ ಈಶ್ವರಪ್ಪನವರ ಮೇಲೆ ಆರೋಪ ನೀರಾದಾರ, ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಕೈವಾಡವಿದೆ ಎಂದು ಮಾಜಿ ಪಾಲಿಕೆ ಸದಸ್ಯ, ಬಿಜೆಪಿ ಮುಖಂಡ ಶಿವಾನಂದ ಮುತ್ತಣ್ಣವರ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ ಪಾಟೀಲ್ ಗುತ್ತಿಗೆದಾರನೆಂದು 40℅ ಕಮಿಷನ್ ಆರೋಪ ಮಾಡಿ ಪ್ರಧಾನಿಯವರಿಗೆ, ಕೇಂದ್ರ ಪಂಚಾಯತ ಸಚಿವರಿಗೆ ಪತ್ರ ಬರೆದ ನಂತರ ಅದನ್ನು ಸಾಬೀತು ಪಡಿಸಬೇಕೆಂದರು. ಸಂತೋಷ ಸಾವಿಗೆ ಕಾಂಗ್ರೆಸ್ ನಾಯಕರಾದ ಡಿಕೆಶಿ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಕಾರಣ ಎಂದು ನೇರ ಆರೋಪ ಮಾಡಿದರು.
Kshetra Samachara
14/04/2022 04:27 pm