ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: 40% ಕಮಿಷನ್ ಕಾಂಗ್ರೆಸ್ ಪಕ್ಷದ ಷಡ್ಯಂತ್ರ: ಅರುಣ್ ಸಿಂಗ್ ಕಿಡಿ

ಹುಬ್ಬಳ್ಳಿ: 40% ಕಮಿಷನ್ ಆರೋಪದ ಹಿಂದೆ ಯಾರಿದ್ದಾರೆ ಎಂಬುವುದು ಗೊತ್ತಿದೆ. ಇದೆಲ್ಲ ಕಾಂಗ್ರೆಸ್ ಷಡ್ಯಂತ್ರ. ತನಿಖೆಯ ನಂತರ ಎಲ್ಲವೂ ಹೊರಬರಲಿದೆ. ಕಾಂಗ್ರೆಸ್ ನಾಯಕರು ಜನರನ್ನು ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಮಿಷನ್‌ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.

ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹೊಸಪೇಟೆಯಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯುತ್ತಿದೆ. ಮೊದಲ ಬಾರಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆಗಮಿಸುತ್ತಿದ್ದಾರೆ. ಕಾರ್ಯಕಾರಣಿಯಲ್ಲಿ ಸಾಕಷ್ಟು ವಿಚಾರಗಳು ಚರ್ಚೆಗೆ ಬರಲಿವೆ ಎಂದರು.

ಮುಂಬರುವ ದಿನದಲ್ಲಿ ಕಾಂಗ್ರೆಸ್ ಇನ್ನಷ್ಟು ಷಡ್ಯಂತ್ರ ರೂಪಿಸಲಿದೆ ಎಂದ ಅವರು, ಡಿ.ಕೆ.ಶಿವಕುಮಾರ್ ಗೆ ಟಾಂಗ್ ಕೊಟ್ಟು ಅರುಣ್ ಸಿಂಗ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಈ ಹಿಂದೆ ವೀಡಿಯೋ ರೂಪಿಸಿದ್ದು, ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಎಷ್ಟೇ ವಿರೋಧಿಸಿದರೂ ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ‌ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/04/2022 07:03 pm

Cinque Terre

55.15 K

Cinque Terre

14

ಸಂಬಂಧಿತ ಸುದ್ದಿ