ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ಉಸ್ತುವಾರಿ: ಶಾಸಕ ಬೆಲ್ಲದ ಶಕ್ತಿ ಪ್ರದರ್ಶನ

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಲೇ ಇದೆ. ಈಗಾಗಲೇ ಸಚಿವ ಸಂಪುಟ ವಿಸ್ತರಣೆ ಕಾರ್ಯ ಮುನ್ನೆಲೆಗೆ ಬರುತ್ತಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಅರವಿಂದ್ ಬೆಲ್ಲದ ಅವರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

ಹೊಸಪೇಟೆಯಲ್ಲಿ ನಡೆಯಲಿರುವ ಬಿಜೆಪಿ ಕಾರ್ಯಕಾರಣಿ ಸಭೆಯ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಶಾಸಕ ಅರವಿಂದ್ ಬೆಲ್ಲದ ತಮ್ಮ ಶಕ್ತಿ ಪ್ರದರ್ಶನ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕಾರಣಿ ಸಭೆಯಲ್ಲಿ ಬಹುತೇಕ ಮಹತ್ವದ ನಿರ್ಧಾರಗಳನ್ನು ಕೈಗೆತ್ತಿಕೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಅರವಿಂದ್ ಬೆಲ್ಲದ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಈಗಾಗಲೇ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಅರವಿಂದ್ ಬೆಲ್ಲದ ಅವರಿಗೆ ಈ ಬಾರಿ ಆದರೂ ಸಚಿವ ಸ್ಥಾನ ಲಭಿಸಲಿದೆಯಾ ಎಂಬುವುದು ಸಾರ್ವಜನಿಕರ ಕುತೂಹಲವನ್ನು ಇಮ್ಮಡಿಗೊಳಿಸಿದೆ. ಇನ್ನೂ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕಾರಣಿ ಸಭೆಯಲ್ಲಿ ಸಚಿವ ಸಂಪುಟದ ವಿಸ್ತರಣೆ ಚರ್ಚೆ ನಡೆದರೇ, ಸಭೆ ಬೆಲ್ಲದ ಅವರಿಗೆ ಬೆಲ್ಲವಾಗಿ ಪರಿಣಮಿಸಲಿದೆ ಎಂಬುವಂತ ಮಾತುಗಳು ಬಿಜೆಪಿ ಆಪ್ತವಲಯದಲ್ಲಿ ಕೇಳಿ ಬರುತ್ತಿವೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

15/04/2022 07:50 pm

Cinque Terre

115.84 K

Cinque Terre

11

ಸಂಬಂಧಿತ ಸುದ್ದಿ