ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ಮೊನ್ನೆ ಶನಿವಾರ ರಾತ್ರಿ ನಡೆದ ಘಟನೆ ನಿಜಕ್ಕೂ ದುರ್ಧೈವದ ಸಂಗತಿಯಾಗಿದೆ. ಘಟನೆ ನಡೆಯಬಾರದಿತ್ತು ನಡೆದು ಹೋಗಿದೆ. ಈ ಬಗ್ಗೆ ಪೊಲೀಸ್ ಆಯುಕ್ತರ ಜೊತೆಗೆ ಮಾತನಾಡಿದ್ದೇವೆ. ಅಮಾಯಕರಿಗೆ ತೊಂದರೆ ಕೊಡದಂತೆ ಮನವಿ ಮಾಡಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ ಹೇಳಿದ್ದಾರೆ.
ಹುಬ್ಬಳ್ಳಿಯ ಗಲಾಟೆಯ ಕುರಿತು ಪಬ್ಲಿಕ್ ನೆಕ್ಸ್ಟ್ ಜೊತೆಗೆ ಮಾತನಾಡಿದ ಅವರು, ಹೂಬಳ್ಳಿಯಂತಿದ್ದ ಹುಬ್ಬಳ್ಳಿಯಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಶಾಂತಿ ಹಾಗೂ ಸೌಹಾರ್ದತೆಯಿಂದ ಕೂಡಿದ್ದ ಹುಬ್ಬಳ್ಳಿಯಲ್ಲಿ ದುರ್ದೈವದಿಂದ ಇಂತಹ ಘಟನೆ ನಡೆದಿದೆ ಎಂದರು.
ಈಗಾಗಲೇ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇವೆ. ಅಮಾಯಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಕೊಡಬೇಡಿ. ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಿ ವಿನಃ ಅಮಾಯಕರಿಗೆ ಯಾವುದೇ ರೀತಿ ತೊಂದರೆ ಕೊಡಬೇಡಿ ಎಂದು ಮನವಿ ಮಾಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/04/2022 10:18 pm