ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ನಡೆಸುವ ತನಿಖೆಗೆ ಯಾರು ಹಸ್ತಕ್ಷೇಪ ಮಾಡಬಾರದು. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೈಗೊಳ್ಳುವ ತನಿಖೆಗೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಅಲ್ಲದೇ ಜನರಿಗೂ ಕೂಡಾ ತಿಳುವಳಿಕೆ ನೀಡುತ್ತೇವೆ. ಆದರೆ ಕಾನೂನು ಕೈಗೆತ್ತಿಕೊಂಡವರಿಗೆ ರಕ್ಷಣೆ ಕೊಡುವುದಿಲ್ಲ ಎಂದು ಹೇಳಿದರು.
ಹಸ್ತಕ್ಷೇಪ ಬೇಡ: ಘಟನೆಯ ತನಿಖೆಯಲ್ಲಿ ಯಾರು ಹಸ್ತಕ್ಷೇಪ ಮಾಡಬಾರದೆಂದು ಸಲಹೆ ನೀಡಿದ ಡಿ.ಕೆ.ಶಿವಕುಮಾರ್ ಅಶಾಂತಿ ಮೂಡಿಸಲು ಪ್ರಚೋದನೆ ಮಾಡಬಾರದು. ಕಾಂಗ್ರೆಸ್ ಹುಬ್ಬಳ್ಳಿಯಲ್ಲಿ ಶಾಂತಿಯನ್ನು ಬಯಸುತ್ತದೆ. ಉದ್ಯೋಗ ಹೆಚ್ಚಿಸಬೇಕೆಂದು ಆಶಿಸುತ್ತದೆ ಎಂದು ಹೇಳಿದರು.
ಈಗಲೇ ನಿರುದ್ಯೋಗ ಹೆಚ್ಚಿದೆ. ಮುಂದೆ ಇನ್ನೂ ಹೆಚ್ಚಾಗುವ ಆತಂಕ ಇದೆ. ಆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಂತಹ ಮಹಾನಗರದಲ್ಲಿ ಅಶಾಂತಿ ಮೂಡಿಸುವುದರಿಂದ ನಿರುದ್ಯೋಗ ಮತ್ತಷ್ಟು ಹೆಚ್ಚುತ್ತದೆ. ಇದರಿಂದ ಎಲ್ಲ ಧರ್ಮದ ಯುವಕರು ಭಾವನಾತ್ಮಕವಾಗಿ ಪ್ರಚೋದನೆಗೆ ಒಳಗಾಗಿ ದುಕೃತ್ಯದಲ್ಲಿ ತೊಡಗಿಕೊಳ್ಳುವ ಅಪಾಯ ಇರುತ್ತದೆ. ಹಾಗಾಗಿ ಹುಬ್ಬಳ್ಳಿಯಲ್ಲಿ ಶಾಂತಿ ನೆಲೆಯಲು ಎಲ್ಲರೂ ಶ್ರಮಿಸಬೇಕು ಎಂದರು.
ಸ್ಲಗ್
ಹುಬ್ಬಳ್ಳಿಯಲ್ಲಿ ಶಾಂತಿ ಮುಖ್ಯ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/04/2022 10:29 pm