ಹುಬ್ಬಳ್ಳಿ : ಕಿಡಿಗೇಡಿಗಳ ಅಚಾತುರ್ಯದಿಂದ ಹುಬ್ಬಳ್ಳಿಯಲ್ಲಿ ಇಂತಹದೊಂದು ಘಟನೆ ನಡೆದಿದೆ. ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಂ ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವು ಕಿಡಿಗೇಡಿಗಳ ಕೃತ್ಯಕ್ಕೆ ಅಶಾಂತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ನಾಗರಾಜ ಛಬ್ಬಿ ಬೇಸರ ವ್ಯಕ್ತಪಡಿಸಿದರು.
ಹಳೇ ಹುಬ್ಬಳ್ಳಿಯಲ್ಲಿ ನಡೆದ ಘಟನೆಯ ಕುರಿತು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ನಾವು ಹಳೇ ಹುಬ್ಬಳ್ಳಿಯಲ್ಲಿಯೇ ಹುಟ್ಟಿ ಬೆಳೆದಿದ್ದೇವೆ. ನಮ್ಮ ಮನೆಯ ನೂರು ಮೀಟರ್ ಅಂತರದಲ್ಲಿ ಇಂತಹದೊಂದು ಘಟನೆ ನಡೆದಿದ್ದು,ಸಾಕಷ್ಟು ಬೇಸರ ತಂದಿದೆ ಎಂದರು.
ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಂ ವೈಷಮ್ಯ ಇಲ್ಲ. ಇಲ್ಲಿ ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ಅವರ ಮನೆಯಲ್ಲಿ ನಾವು ಊಟ ಮಾಡುತ್ತೇವೆ. ನಮ್ಮ ಮನೆಯಲ್ಲಿ ಅವರು ಊಟ ಮಾಡುತ್ತಾರೆ. ನಾವು ಸೌಹಾರ್ದತೆಯಿಂದ ಜೀವನ ನಡೆಸುತ್ತಿದ್ದೇವೆ. ಆದರೆ ಕಿಡಿಗೇಡಿಗಳ ದೃಷ್ಕೃತ್ಯದಿಂದ ಇಂತಹದೊಂದು ಘಟನೆ ನಡೆದಿದ್ದು,ನಿಜಕ್ಕೂ ಬೇಸರದ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
Kshetra Samachara
19/04/2022 10:31 pm