ಹುಬ್ಬಳ್ಳಿ: ಹುಬ್ಬಳ್ಳಿ ಹೂಬಳ್ಳಿಯಾಗಿಯೇ ಇರಬೇಕು. ಸರ್ವ ಜನಾಂಗದ ಶಾಂತಿಯ ತೋಟ ಎಂದರೇ ಅದು ಹುಬ್ಬಳ್ಳಿ. ಇಲ್ಲಿ ಈ ರೀತಿಯ ಘಟನೆಗಳು ಮತ್ತೇ ಮರುಕಳಿಸಬಾರದು ಎಂದು ನವಲಗುಂದ ಮತಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಹೇಳಿದರು.
ಕೋಮುಗಲಭೆ ಪ್ರಕರಣದ ಕುರಿತು ನಗರದಲ್ಲಿಂದು ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿದ ಅವರು, ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿ ಆದರೆ ಯಾವುದೇ ಕಾರಣಕ್ಕೂ ಇಂತಹ ಘಟನೆಗಳಲ್ಲಿ ಅಮಾಯಕರು ಬಲಿಯಾಗಬಾರದು ಎಂದರು.
ಈಗಾಗಲೇ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಪೊಲೀಸ್ ಆಯುಕ್ತರ ಜೊತೆಗೆ ಸಮಾಲೋಚನೆ ನಡೆಸಿ ಅಮಾಯಕರನ್ನು ಬಂಧಿಸದಂತೆ ಹೇಳಿದ್ದಾರೆ ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/04/2022 10:47 pm