ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಾಲಿಕೆ ಸದಸ್ಯರಿಂದಲೇ ಪ್ರತ್ಯೇಕ ಪಾಲಿಕೆಗೆ ಹೆಚ್ಚಿದ ಒತ್ತಡ

ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗೆ ಧಾರವಾಡದ ಪಾಲಿಕೆ ಸದಸ್ಯರೂ ಇದೀಗ ಬೆಂಬಲ ನೀಡಿದ್ದಾರೆ.

ಶುಕ್ರವಾರ ಧಾರವಾಡದ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಪಾಲಿಕೆ ಸದಸ್ಯರು, ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಜಾರಿ ಮಾಡಲೇಬೇಕು ಎಂದು ಆಗ್ರಹಿಸಿದರು. ಈ ಪ್ರತಿಭಟನೆಗೆ ಶಾಸಕ ಅರವಿಂದ ಬೆಲ್ಲದ ಕೂಡ ಬಂದು ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟಗಾರರ ಮನವಿ ಸ್ವೀಕರಿಸಿದರು.

ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಪಾಲಿಕೆ ಸದಸ್ಯರೂ ಪಕ್ಷಾತೀತವಾಗಿ ಹೋರಾಟಕ್ಕೆ ಬೆಂಬಲ ನೀಡಿದ್ದು, ಅಧಿಕಾರ ವಹಿಸಿಕೊಂಡ ಮೊದಲ ಸಭೆಯಲ್ಲೇ ಪ್ರತ್ಯೇಕ ಮಹಾನಗರ ಪಾಲಿಕೆಗೆ ಒತ್ತಾಯ ಮಾಡಲಾಗುವುದು ಎಂದು ಎಲ್ಲ ಸದಸ್ಯರು ತಮ್ಮ ಅಭಿಪ್ರಾಯ ಮಂಡಿಸಿದರು. ಏನೇ ಆಗಲಿ ಸದ್ಯ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು ಎಂಬ ಕೂಗು ಜೋರಾಗಿಯೇ ಕೇಳಿ ಬಂದಿದ್ದು, ಈ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯೂ ಇದೆ.

Edited By : Nagesh Gaonkar
Kshetra Samachara

Kshetra Samachara

22/04/2022 03:17 pm

Cinque Terre

31.99 K

Cinque Terre

3

ಸಂಬಂಧಿತ ಸುದ್ದಿ