ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ, ಇಂದು ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಹಾನಿಯಾದ ಸ್ಥಳವನ್ನು ವೀಕ್ಷಣೆ ಮಾಡಿ ಮಾಹಿತಿ ಪಡೆದರು.
ಕಳೆದ ಶನಿವಾರ ಹನುಮ ಜಯಂತಿ ದಿನ, ಹಳೇ ಹುಬ್ಬಳ್ಳಿಯ ಕೋಮು ಗಲಭೆಯಲ್ಲಿ ಅಲ್ಲೆ ಇದ್ದ ದಿಡ್ಡಿ ಆಂಜನೇಯ ಸ್ವಾಮಿ ದೇವಸ್ಥಾನದ ಮೇಲೆ ಮುಸ್ಲಿಂ ಪುಂಡರು ದಾಳಿ ನಡೆಸಿ ದೇವಸ್ಥಾನಕ್ಕೆ ಹಾನಿಯನ್ನುಂಟು ಮಾಡಿದ್ದರು.
ಇಂದು ಘಟನಾ ಸ್ಥಳಕ್ಕೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯ ತಿಪ್ಪಣ್ಣ ಮಜ್ಜಗಿ, ಬಿಜೆಪಿ ವಕ್ತಾರ ರವಿ ನಾಯಕ, ದತ್ತಮೂರ್ತಿ ಕುಲಕರ್ಣಿ ಸೇರಿದಂತೆ ಬಿಜೆಪಿ ಮುಖಂಡರು ದೇವಸ್ಥಾನಕ್ಕೆ ಆಗಮಿಸಿ ಘಟನೆಯ ಮಾಹಿತಿ ಪಡೆದರು.
Kshetra Samachara
23/04/2022 02:31 pm