ಹುಬ್ಬಳ್ಳಿ : ಹಳೇ ಹುಬ್ಬಳ್ಳಿಯಲ್ಲಿ ಏಪ್ರಿಲ್ 16ರಂದು ಶನಿವಾರ ರಾತ್ರಿ ನಡೆದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ, ದಿಡ್ಡಿ ಹನುಮಂತ ದೇವಸ್ಥಾನ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಧಾರವಾಡ ಜಿಲ್ಲಾ ಬಿಜೆಪಿ ಪ್ರಮುಖರ ಸಭೆಗೆ ಹುಬ್ಬಳ್ಳಿಗೆ ಆಗಮಿಸಿದ ನಳೀನಕುಮಾರ್ ಕಟೀಲ ಪರಿಶೀಲನೆ ನಡೆಸಿದ್ದಾರೆ.
ಪೊಲೀಸ್ ಇಲಾಖೆಯಿಂದ ಹಾಗೂ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಘಟನೆಯ ಬಗ್ಗೆ ಹಾಗೂ ಪ್ರಸ್ತುತ ಬೆಳವಣಿಗೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
Kshetra Samachara
26/04/2022 12:52 pm