ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪ್ರತಿಭಟನೆಗಿಳಿದ ಜಲಮಂಡಳಿ ನೌಕರರು

ಧಾರವಾಡ: ಹುಬ್ಬಳ್ಳಿ, ಧಾರವಾಡ ಮಹಾನಗರ ನೀರು ಸರಬರಾಜು ನಿರ್ವಹಣೆಗಾಗಿ ಕರ್ನಾಟಕ ಜಲಮಂಡಳಿಯವರಿಂದ ಕಳೆದ 20 ವರ್ಷಗಳಿಂದಲೂ ಗುತ್ತಿಗೆ, ದಿನಗೂಲಿ ಹಂಗಾಮಿ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಆದರೆ ಈಗ ನೀರು ಸರಬರಾಜು ನಿರ್ವಹಣೆಯನ್ನು ಮೆ.ಎಲ್ ಆಂಡ್ ಟಿ ಕಂಪೆನಿಗೆ ಗುತ್ತಿಗೆ ವಹಿಸಿ, ಕೆಲಸಕ್ಕೆ ಹೊಸಬರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕೊಟ್ಟಿರುವುದುನ್ನು ಖಂಡಿಸಿ ಧಾರವಾಡದಲ್ಲಿ ಜಲಮಂಡಳಿ ನೌಕರರು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಧಾರವಾಡ ಜಲಮಂಡಳಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಸಂಚರಿಸಿದ್ದು, ಈ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಹುಬ್ಬಳ್ಳಿ, ಧಾರವಾಡ ಮಹಾನಗರ ಸಭೆಯ ನೀರು ಸರಬರಾಜು ವಿಭಾಗದ ದಿನಗೂಲಿ, ಗುತ್ತಿಗೆ ಹಾಗೂ ಹಂಗಾಮಿ ನೌಕರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಯಿತು.

ಜಲಮಂಡಳಿಯಲ್ಲಿ 600ಕ್ಕೂ ಹೆಚ್ಚು ನೌಕರರು 20 ವರ್ಷದಿಂದ ನಿರಂತರ ಕೆಲಸ ಮಾಡುತ್ತಿದ್ದಾರೆ. ಆದರೆ ಪಾಲಿಕೆಯವರು ಕರ್ನಾಟಕ ಜಲಮಂಡಳಿಯವರಿಂದ ಪ್ರಸ್ತುತ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಕ್ ಸಮೇತ ಹಸ್ತಾಂತರಿಸಿಕೊಳ್ಳದೇ ಸಾಮೂಹಿಕವಾಗಿ ವಜಾ ಮಾಡಿ, ಹೊಸಬರನ್ನು ನೇಮಕ ಮಾಡಿಕೊಂಡು ಕೆಲಸ ನಿರ್ವಹಿಸುವಂತೆ ಖಾಸಗಿ ಗುತ್ತಿಗೆದಾರ ಎಲ್‌ಆಂಡ್‌ಟಿ ಅವರಿಗೆ ಅನುಮತಿ ನೀಡಿದ್ದಾರೆ. ಇದರಿಂದ 600 ಜನ ನೌಕರರು ಬೀದಿಗೆ ಬಿದ್ದಂತಾಗಿದೆ. ಕೂಡಲೇ ನೌಕರರನ್ನು ಮೊದಲಿನಂತೆ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಯಿತು.

Edited By : Nagesh Gaonkar
Kshetra Samachara

Kshetra Samachara

26/04/2022 04:30 pm

Cinque Terre

54.31 K

Cinque Terre

6

ಸಂಬಂಧಿತ ಸುದ್ದಿ