ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚುನಾವಣೆ ಎದುರಿಸಲು ಸಮಾವೇಶ: ಕಾರ್ಯಪ್ರವೃತ್ತರಾಗಲು ಕಮಲ ಪಡೆಯ ಕರೆ !

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಯನ್ನು ಮತ್ತಷ್ಟು ಬಲಪಡಿಸುವ ಸದುದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಪ್ರಮುಖರ ಸಭೆಯ ಬಳಿಕ ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು.

ಹುಬ್ಬಳ್ಳಿ ಗೋಕುಲ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಚಾಲನೆ ನೀಡಲಾಯಿತು.

ಸಮಾವೇಶದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ವಿ.ಸೋಮಣ್ಣ, ಸಿ.ಸಿ. ಪಾಟೀಲ್, ಶಾಸಕ ಅರವಿಂದ ಬೆಲ್ಲದ್, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ತೇಜಸ್ವಿನಿ ಅನಂತಕುಮಾರ್ ಮತ್ತಿತರರು ಉಪಸ್ಥಿತಿಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲಾಯಿತು.

ಬಿಜೆಪಿ ಕಾರ್ಯಕರ್ತರ ಹಾಗೂ ಪ್ರಮುಖರ ಸಂಘಟನೆಯಿಂದ ಆಯೋಜಿಸಿರುವ ಸಮಾವೇಶದಲ್ಲಿ ಈಗಿನಿಂದಲೇ ಚುನಾವಣಾ ತಯಾರಿ ನಡೆಸುವಂತೆ ಮುಖಂಡರಿಗೆ ಕರೆ ನೀಡಲಾಯಿತು.

Edited By : Manjunath H D
Kshetra Samachara

Kshetra Samachara

26/04/2022 10:44 pm

Cinque Terre

58.28 K

Cinque Terre

2

ಸಂಬಂಧಿತ ಸುದ್ದಿ