ಹುಬ್ಬಳ್ಳಿ: ಪಿಡಬ್ಲೂಡಿ ಪರೀಕ್ಷಾ ಹಗರಣಕ್ಕೂ ಮತ್ತು ಲೋಕೋಪಯೋಗಿ ಇಲಾಖೆಗೂ ಯಾವುದೇ ಸಂಬಂಧವಿಲ್ಲ. ಪರೀಕ್ಷಾ ಅವ್ಯವಹಾರದ ಕುರಿತು ತನಿಖೆ ನಡೆಯುತ್ತಿದೆ. ತನಿಖೆಯ ನಂತರವೇ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.
ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲೋಕೋಪಯೋಗಿ ಸಚಿವನಾದ ಸಂದರ್ಭದಲ್ಲಿ ಕೋರ್ಟ್ ನಲ್ಲಿದ್ದ ಕೇಸ್ ಬಗೆಹರಿದು, ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ಗಳ ನೇಮಕಕ್ಕೆ ಕೋರ್ಟ್ ನಿಂದ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಯಿಂದ ನೇಮಕಾತಿ ಮಾಡುವುದರಿಂದ ನಿಷ್ಪಕ್ಷಪಾತವಾಗಿ ಅಭ್ಯರ್ಥಿ ಆಯ್ಕೆ ಮಾಡಬಹುದೆಂದು ಕೆಪಿಎಸ್‌ಸಿ ಗೆ ನೀಡಿದ್ದೇವೆ ಎಂದರು.
ಕೆಪಿಎಸ್ ಸಿ ಅತ್ಯಂತ ಸ್ಪಷ್ಟತೆಯಿಂದ ಕೆಲಸ ಮಾಡಿದೆ. ಈ ಭಾಗದ ವಿದ್ಯಾರ್ಥಿಗಳನ್ನು ಆ ಭಾಗಕ್ಕೆ ಆ ಭಾಗದ ವಿದ್ಯಾರ್ಥಿಗಳನ್ನು ಈ ಭಾಗಕ್ಕೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು, ಯಾವುದೇ ರೀತಿ ಅವ್ಯವಹಾರ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದೆ. ಪ್ರಮಾಣಿಕ ಪ್ರಯತ್ನ ಮಾಡಿದೆ.
ಆದರೆ ಕೆಲವೊಂದು ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನ ಬಳಸಿ ಪರೀಕ್ಷೆ ಬರೆದು ಆಯ್ಕೆ ಆಗಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಂದ ಲಭ್ಯವಾಗಿದ್ದು, ಇದರ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಯಾವ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದ್ದಾರೆ. ತನಿಖೆ ನಡೆಯುತ್ತಿದ್ದೆ. ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿದೆ. ಆದರೆ ಪಿಡಬ್ಲೂಡಿ ಇಲಾಖೆಗೆ ಹಾಗೂ ಪರೀಕ್ಷೆಗೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/04/2022 10:49 pm