ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆ ಹುಬ್ಬಳ್ಳಿ ಠಾಣೆಯಲ್ಲಿ ಕಟೀಲ್ ವಿರುದ್ಧ ದೂರು ದಾಖಲು !

ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹುಬ್ಬಳ್ಳಿ ಗಲಭೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಪ್ರೇರಣೆ ಎಂದು ಆಧಾರ ರಹಿತವಾದ ಆರೋಪ ಮಾಡಿದ್ದಾರೆ. ಇದು ರಾಜ್ಯದ ಒಬ್ಬ ಮಾಜಿ ಮುಖ್ಯಮಂತ್ರಿ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ವೇಸವ್ಯಾಸ ಕೌಲಗಿ ಹಳೆ ಹುಬ್ಬಳ್ಳಿ ಠಾಣೆಯಲ್ಲಿ ನಳಿನ್ ಕುಮಾರ್ ಕಟೀಲ್ ವಿರುದ್ಧ ದೂರು ದಾಖಲಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹುಬ್ಬಳ್ಳಿ ಗಲಭೆ ನಡೆದ ಸ್ಥಳಗಳಿಗೆ ಏಪ್ರಿಲ್ 26 ರಂದು ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿ, ಹುಬ್ಬಳ್ಳಿ ಗಲಭೆಗೆ ಸಿದ್ದರಾಮಯ್ಯ ಅವರೇ ಪ್ರೇರಣೆ, ಅವರ ಕಾಲದಲ್ಲಿಯೇ ಅತಿ ಹೆಚ್ಚು ಗಲಭೆಗಳು ನಡೆದಿವೆ ಎಂಬ ಹೇಳಿಕೆ ಕೊಟ್ಟಿದ್ದರು. ಇದನ್ನು ಖಂಡಿಸಿ ಕಾಂಗ್ರೆಸ್ ಮುಖಂಡ ವೇದವ್ಯಾಸ್ ಕೌಜಲಗಿ ದೂರು ನೀಡಿದರು.

ಈ ವೇಳೆ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆಗೆ ಸಾಕ್ಷಿ ಪುರಾವೆಗಳನ್ನು ಒದಗಿಸಲು ಪೊಲೀಸರು ತಕ್ಷಣ ನೋಟಿಸ್ ಜಾರಿ ಮಾಡಬೇಕು. ಸಿದ್ದರಾಮಯ್ಯ ಅವರ ತೇಜೋವಧೆ ಮಾಡಿರುವ ನಳಿನ್ ಕುಮಾರ್ ವಿರುದ್ಧ FIR ದಾಖಲು ಮಾಡಬೇಕೆಂದು ಒತ್ತಾಯಿಸಿದರು.

Edited By : Nagesh Gaonkar
Kshetra Samachara

Kshetra Samachara

27/04/2022 05:12 pm

Cinque Terre

35.24 K

Cinque Terre

11

ಸಂಬಂಧಿತ ಸುದ್ದಿ