ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ; ಗಲಭೆಯ ಹಿಂದಿರುವ ಕಾಣದ ಕೈಗಳ ಬಂಧನ ಮಾಡಿ: ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಹುಬ್ಬಳ್ಳಿ: ಹುಬ್ಬಳ್ಳಿಯ ಪೊಲೀಸರನ್ನು ನಾನು ಅಭಿನಂದಿಸುತ್ತೇನೆ. ಸರ್ಕಾರಕ್ಕೆ ಮುಜುಗರ ತರುವಂತಹ ಘಟನೆ ನಡೆಯುತ್ತಿತ್ತು. ಆದರೆ ಪೊಲೀಸರು ಇದನ್ನೆಲ್ಲಾ ತಪ್ಪಿಸಿದ್ದಾರೆ. ಈ ಘಟನೆ ಹಿಂದೆ ಕಾಣದ ಕೈಗಳು ಯಾರಿದ್ದಾರೋ..? ಅಂತಹವರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ನಗರದಲ್ಲಿಂದು ಅಂಜುಮನ್ ಇಸ್ಲಾಂ ಸಂಸ್ಥೆಗೆ ಭೇಟಿ ನೀಡಿದ ವೇಳೆಯಲ್ಲಿ ಮಾತನಾಡಿದ ಅವರು, ಅಮಾಯಕ ಮಕ್ಕಳು ಈ ಘಟನೆ ನೋಡುತ್ತಾ ಇದ್ದರು. ಅಂತಹವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಾದವರ ಹಿನ್ನೆಲೆಯನ್ನ ನೋಡಬೇಕು. ಅವರ ಮೇಲೆ ಯಾವುದಾದರೂ ಕೇಸ್ ಇದ್ದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ. ಕೇಸ್‌ಗಳು ಇಲ್ಲವಾದ್ರೆ ಅವರನ್ನ ಬಿಟ್ಟು ಬಿಡಲಿ.‌ ನಾನು ಅಧಿಕಾರಿಗಳಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಧಕ್ಕೆ ಆಗಬಾರದು. ಎಲ್ಲರೂ ಶಾಂತಿಯಿಂದ ಬದುಕಬೇಕು.‌ ಕಲ್ಲು ತೂರಾಟ ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಿ ನಾನು ಸಹಮತ ಕೊಡುತ್ತೇನೆ. ನಮ್ಮ ಪಕ್ಷ ಸಮಾಜಘಾತುಕ ಘಟನೆಗಳಿಗೆ ಅವಕಾಶ ಮಾಡಿಕೊಡುವುದಿಲ್ಲ ಎಂದರು.

ಹಿಜಾಬ್, ಹಲಾಲ್ ವಿಚಾರವಾಗಿ ಸರ್ಕಾರ ಪ್ರಾರಂಭದಲ್ಲಿಯೇ ಚಿವುಟಿ ಹಾಕಬೇಕಾಗಿತ್ತು.‌ ಹುಬ್ಬಳ್ಳಿಯ ಗಲಭೆ ಪ್ರಕರಣ ಪೂರ್ವ ನಿಯೋಜಿತವಾಗಿದ್ದು, ಡಿಜೆ ಹಳ್ಳಿ ,ಕೆಜಿ ಹಳ್ಳಿ ಘಟನೆ ನಡೆಯಲು ಕಾರಣೀಭೂತರಾದವರು ಈಗಲೂ ಆರಾಮವಾಗಿ ಓಡಾಡುತ್ತಿದ್ದಾರೆ. ಒಂದು ಪಕ್ಷದ ಮುಖಂಡರ ಜೊತೆಗೆ ಸುತ್ತಾಡುತ್ತಿದ್ದಾರೆ‌ ಎಂದು ಪರೋಕ್ಷವಾಗಿ ಜಮೀರ್ ಅಹ್ಮದ್ ವಿರುದ್ಧ ವಾಗ್ದಾಳಿ ನಡೆಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

28/04/2022 08:54 pm

Cinque Terre

40.94 K

Cinque Terre

18

ಸಂಬಂಧಿತ ಸುದ್ದಿ