ಧಾರವಾಡ: ಸಭಾಪತಿ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, ತಮ್ಮನ್ನು ಬಿಜೆಪಿಗೆ ಕರೆದವರೇ ಸುಮ್ಮನೆ ಕುಳಿತಿದ್ದಾರೆ ಎಂದು ಹೊರಟ್ಟಿ ಹೇಳಿದ್ದಾರೆ. ಹೀಗೆ ಒಗಟು ಒಗಟಾಗಿ ಮಾತನಾಡಲು ನನಗೆ ಬರೋದಿಲ್ಲ. ನಾನು ಸರಳ ಮನುಷ್ಯ ಎಂದರು.
ಹೊರಟ್ಟಿ ಬಿಜೆಪಿ ಸೇರ್ಪಡೆ ವಿಚಾರವಾಗಿ ಏನು ಹೇಳಿದ್ದಾರೋ ಹಾಗೂ ಮೋಹನ ಲಿಂಬಿಕಾಯಿ ಅವರು ಏನು ಹೇಳಿದ್ದಾರೋ ಎಂಬುದನ್ನು ನಾನು ಗಮನಿಸಿಲ್ಲ. ಈ ಸಂಬಂಧ ಪಕ್ಷದ ರಾಜ್ಯ ಅಧ್ಯಕ್ಷರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
30/04/2022 08:45 pm