ನವಲಗುಂದ: ನವಲಗುಂದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಬೆಳಿಗ್ಗೆಯಿಂದಲೇ ಆರಂಭವಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷರು ಸ್ಥಾನಕ್ಕೆ ನಾಮ ಪತ್ರ ಸಲ್ಲಿಕೆಯಾಗಿದೆ. ಈ ಹಿನ್ನೆಲೆ ಪುರಸಭೆ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅಪ್ಪಣ್ಣ ಹಳ್ಳದ, ಉಪಾಧ್ಯಕ್ಷ ಸ್ಥಾನಕ್ಕೆ ಪದ್ಮಾವತಿ ಪೂಜಾರ ನಾಮ ಪತ್ರ ಸಲ್ಲಿಸಿದ್ದು, ಬಿಜೆಪಿ ಪಕ್ಷದ ವತಿಯಿಂದ ಅಧ್ಯಕ್ಷ ಸ್ಥಾನಕ್ಕೆ ಮಹಾಂತೇಶ್ ಕಲಾಲ್, ಉಪಾಧ್ಯಕ್ಷ ಸ್ಥಾನಕ್ಕೆ ಜ್ಯೋತಿ ಗೊಲ್ಲರ ನಾಮ ಪತ್ರ ಸಲ್ಲಿಸಿಲಾಗಿದೆ. ಇನ್ನು ಈ ವೇಳೆ ತಾಲೂಕಾ ಆಡಳಿತದ ವತಿಯಿಂದ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗಿತ್ತು.
Kshetra Samachara
06/05/2022 02:08 pm