ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಯತ್ನಾಳಗೆ ಮೊದಲು ನೋಟಿಸ್ ಕೊಡಲಿ: ಡಿಕೆಶಿ

ಧಾರವಾಡ: ಬಸನಗೌಡ ಪಾಟೀಲ ಯತ್ನಾಳ ಅವರು, 2, 500 ಕೋಟಿ ಕೊಟ್ಟರೆ ಸಿಎಂ ಆಗಬಹುದು ಎಂಬ ಹೇಳಿಕೆ ಕೊಟ್ಟಿದ್ದಾರೆ. ಮೊದಲು ಅವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ಅಕ್ರಮ ನೇಮಕಾತಿ ಸಂಬಂಧ ಪ್ರಿಯಾಂಕ ಖರ್ಗೆ ಅವರಿಗೆ ಸಿಐಡಿ ನೋಟಿಸ್ ಕೊಡುತ್ತದೆ. 2,500 ಕೋಟಿ ಸಿಎಂ ಪೋಸ್ಟ್‌ಗೆ ಕೊಡಬೇಕು ಎಂದು ಯತ್ನಾಳ ಹೇಳಿದ್ದಾರೆ. ಮೊದಲು ಯತ್ನಾಳ ಅವರಿಗೆ ನೋಟಿಸ್ ಕೊಟ್ಟು ತನಿಖೆ ನಡೆಸಬೇಕು ಎಂದು ಡಿಕೆಶಿ ಆಗ್ರಹಿಸಿದರು.

ಪಿಎಸ್ಐ ನೇಮಕಾತಿಯಲ್ಲಿ ಸಚಿವರಿಬ್ಬರ ಕೈವಾಡ ಇದೆ. ಇದರ ಬಗ್ಗೆ ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಮಾಹಿತಿ ಇದೆ. ನಾವೂ ಹೋರಾಟ ಮಾಡುತ್ತಿದ್ದೇವೆ. ಸಿಎಂ ಅವರು ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ತಾವು ಭಾಗಿಯಾಗಿಲ್ಲ ಎನ್ನುವುದಾದರೆ ಪ್ರಾಮಾಣಿಕವಾಗಿ ತನಿಖೆ ನಡೆಸಬೇಕು. ಈ ಅಕ್ರಮದಲ್ಲಿ ಭಾಗಿಯಾದ ಸಚಿವರ ಹೆಸರನ್ನು ಬಹಿರಂಗಪಡಿಸಬೇಕು. ಸಚಿವರ ಹೆಸರು ಬಹಿರಂಗಗೊಳ್ಳುತ್ತದೆ ಎಂದು ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ತನಿಖಾಧಿಕಾರಿಗಳಿಗೆ ಮುಕ್ತವಾಗಿ ತನಿಖೆ ಮಾಡಲು ಅವಕಾಶ ಕೊಡಬೇಕು. ಈ ಹಿಂದೆ ಯಡಿಯೂರಪ್ಪ ಅವರು 40% ಕಮೀಷನ್ ಅಂತಾ ಹೇಳಿದ್ರು ಆ ವಿಚಾರವಾಗಿ ಮೊದಲು ತನಿಖೆ ನಡೆಸಬೇಕು ಎಂದರು.

Edited By :
Kshetra Samachara

Kshetra Samachara

07/05/2022 04:14 pm

Cinque Terre

24.09 K

Cinque Terre

4

ಸಂಬಂಧಿತ ಸುದ್ದಿ