ಧಾರವಾಡ: ಅಡುಗೆ LPG ಸಿಲಿಂಡರ್ ದರ 50 ರೂ ಏರಿಸಿರುವುದನ್ನು ಖಂಡಿಸಿ, ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿದ, ಎಸ್‌ಯುಸಿಐ-ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಧಾರವಾಡ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಈಗಾಗಲೇ ಅಡುಗೆ LPG ಸಿಲಿಂಡರ್ ದರ ಗಗನಕ್ಕೇರಿದೆ. ಇಂತಹ ಸಂದರ್ಭದಲ್ಲಿ ಮತ್ತೆ ಕೇಂದ್ರ ಸರ್ಕಾರ 50ರೂ ಹೆಚ್ಚಳ ಮಾಡಿದೆ. ಈಗ ಒಟ್ಟು ಸಿಲಿಂಡರ್ ಬೆಲೆ 1019 ಆಗಿದೆ. ಇದನ್ನು ಖಂಡಿಸಿದ ಎಸ್‌ಯುಸಿಐ-ಕಮ್ಯುನಿಸ್ಟ್ ಪಕ್ಷದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರವು ಅಗತ್ಯ ವಸ್ತುಗಳ ಬೆಲೆಯನ್ನು ಪದೇ ಪದೇ ಹೆಚ್ಚಳ ಮಾಡುತ್ತಿದೆ. ಇದೇ ರೀತಿ ಬೆಲೆ ಏರಿಕೆ ಆಗುತ್ತಲೇ ಇದ್ದರೆ ಬಡವರ ಜೀವನ ನಡೆಸುವುದು ಕಷ್ಟಕರವಾಗುತ್ತೆ. ಇದನ್ನು ಅರಿತು ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಹಾಗೂ ಜನಸಾಮಾನ್ಯರಿಗೆ ಹೊರೆಯಾಗುತ್ತಿರುವ ತೈಲ ಬೆಲೆ ನಿಯಂತ್ರಿಸಬೇಕು. ಹಾಗೂ ಮರು ಪರಿಷ್ಕರಿಸಬೇಕು ಎಂದು ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ
Kshetra Samachara
08/05/2022 06:15 pm