ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಭಾಪತಿ ಸ್ಥಾನಕ್ಕೆ ಮೇ 18 ರಂದು ರಾಜೀನಾಮೆ ನೀಡ್ತೇನೆ: ಹೊರಟ್ಟಿ

ಧಾರವಾಡ: ಮೇ 18ಕ್ಕೆ ನಾನು ನನ್ನ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 11ಕ್ಕೆ ರಾಜೀನಾಮೆ ಕೊಡಬೇಕಿತ್ತು. ಆದರೆ, ಚುನಾವಣಾ ನೋಟಿಫಿಕೇಶನ್ ಬರದಿದ್ದ ಕಾರಣ ನೀಡಿರಲಿಲ್ಲ. ಈಗ ನೋಟಿಫಿಕೇಶನ್ ಕೂಡ ಬಂದಿದೆ. ಮೇ 18ಕ್ಕೆ ರಾಜೀನಾಮೆ ನೀಡುತ್ತೇನೆ ಎಂದರು.

ಮೋಹನ ಲಿಂಬಿಕಾಯಿ ಅವರೂ ತಾವೇ ಪರಿಷತ್ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಹೊರಟ್ಟಿ, ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದರು.

ಬಿಜೆಪಿ ಟಿಕೆಟ್ ವಿಚಾರವಾಗಿ ಮೇ 18 ರ ನಂತರವೇ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೊರಟ್ಟಿ ಹೇಳಿದರು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

12/05/2022 06:53 pm

Cinque Terre

100.98 K

Cinque Terre

5

ಸಂಬಂಧಿತ ಸುದ್ದಿ