ಹುಬ್ಬಳ್ಳಿ: ಸಚಿವ ಬಿ.ಶ್ರೀರಾಮುಲು ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಬೆಲೆ ಬಾಳುವ ಭೂಮಿಯನ್ನು ಅಕ್ರಮವಾಗಿ ಕಬಳಿಸಿದ್ದಾರೆ. ಕೂಡಲೇ ಅವರು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಬೇಕೆಂದು ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಚಿತ್ರದುರ್ಗ ಮೊಳಕಾಲ್ಮುರು ಕ್ಷೇತ್ರದ ಶಾಸಕ ಬಿ.ಶ್ರೀರಾಮುಲು 27.25 ಎಕರೆ ಭೂ ಹಗರಣದಲ್ಲಿ ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು ಖೋಟಿ ದಾಖಲೆಗಳನ್ನು ಸೃಷ್ಟಿಸಿ ಬಳ್ಳಾರಿಯ ಬೆಲೆ ಬಾಳುವ ಭೂಮಿಯನ್ನು ಕಬಳಿಸುವ ಹುನ್ನಾರ ನಡೆಸಿದ್ದಾರೆ.
ಈ ಬಗ್ಗೆ ಮಹತ್ವದ ದಾಖಲೆಗಳನ್ನು ನ್ಯಾಷನಲ್ ಕಮಿಟಿ ಫಾರ್ ಪ್ರೊಟೆಕ್ಷನ್ ಆಫ್ ನ್ಯಾಚರಲ್ ರಿಸೋರ್ಸಸ್ (NCPNR) ಜನ ಸಂಗ್ರಾಮ ಪರಿಷತ್ ಹಾಗೂ ಸಮಾನ ಮನಸ್ಕ ಸಂಘಟನೆಗಳು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿವೆ. ಈ ಕೂಡಲೇ ಬಿ.ಶ್ರೀರಾಮುಲು ನೈತಿಕ ಹೊಣೆ ಹೊತ್ತು ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಬೇಕೆಂದು ಎಸ್.ಆರ್.ಹಿರೇಮಠ ಒತ್ತಾಯಿಸಿದರು.
ಇನ್ನು ಗಣಿ ಭಾದಿತ ವಲಯ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ ಅನುಷ್ಠಾನಗೊಳಿಸಲು ಹಾಗೂ ಉಸ್ತುವಾರಿಯಾಗಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಜಸ್ಟಿಸ್ ಬಿ.ಸುದರ್ಶನ ರೆಡ್ಡಿ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಏ.21 ರಂದು ಆದೇಶ ನೀಡಿದೆ. ಇದನ್ನು ಸಮಾಜ ಪರಿವರ್ತನ ಸಮುದಾಯ ಸ್ವಾಗತಿಸುತ್ತದೆ ಎಂದು ಹಿರೇಮಠ ತಿಳಿಸಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/05/2022 03:28 pm