ಹುಬ್ಬಳ್ಳಿ: ಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬ್ಯೂಸಿ ಇದ್ದೇವೆ. ನಿನ್ನೆಯಷ್ಟೇ ಕೊರ್ ಕಮಿಟಿ ಸಭೆ ಆಗಿದೆ. ಸಭೆಯ ನಿರ್ಧಾರದ ಬಗ್ಗೆ ಹೈ ಕಮಾಂಡ್ ಗಮನಕ್ಕೆ ತಂದು ಶೀಘ್ರದಲ್ಲಿ ಸಂಪುಟ ವಿಸ್ತರಣೆ ಅಂತಿಮ ಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದ ವಿಸ್ತರಣೆ ಎರಡು ದಿನಗಳಲ್ಲಿ ಇತ್ಯರ್ಥಕ್ಕೆ ಬರಲಿದೆ. ಸಭೆಯ ಕುರಿತು ಹೈ ಕಮಾಂಡ್ ನಿರ್ಧಾರದ ನಂತರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಅವರು ಹೇಳಿದರು.
ವಿಜಯೇಂದ್ರಗೆ ಪರಿಷತ್ ಸ್ಥಾನ ನೀಡಿ ಮಂತ್ರಿ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಹಿಜಾಬ್, ಹಲಾಲ್, ಆಜಾನ್ ವಿವಾದದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದೇವೆ. ಸರ್ಕಾರದ ಗಂಡಸುತನ ತೋರಿಸುತ್ತಿಲ್ಲ ಎನ್ನೋ ಆರೋಪಕ್ಕೆ ತೀರುಗೇಟು ನೀಡಿದ ಸಿಎಂ ಬೊಮ್ಮಾಯಿ, ದಕ್ಷ, ಜನಪರ ಆಡಳಿತ ನೀಡುತ್ತಿದ್ದೇವೆ ವಿರೋಧಿಗಳಿಗೆ ಅದೇ ನಮ್ಮ ಉತ್ತರ ಎಂದು ತಿರುಗೇಟು ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
15/05/2022 12:41 pm