ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೇಯರ್-ಉಪಮೇಯರ್ ಆಯ್ಕೆಗೆ ಮತ್ತೊಂದು ವಿಘ್ನ: ಕೋರ್ಟ್ ನಿರ್ಧಾರದಲ್ಲಿಯೇ ಇತ್ಯರ್ಥ...!

ಹುಬ್ಬಳ್ಳಿ: ಅಂತೂ ಇಂತೂ ಮೇಯರ್, ಉಪಮೇಯರ್ ಆಯ್ಕೆಗೆ ಶುಕ್ರದಸೆ ಬಂತೂ ಎನ್ನುವಷ್ಟರಲ್ಲಿ ಮತ್ತೊಂದು ಕಂಟಕ ಎದುರಾಗಿದೆ. ಒಂಬತ್ತು ತಿಂಗಳ ನಂತರ ಕೂಡಿ ಬಂದಿದ್ದ ಕಾಲಕ್ಕೆ ಈಗ ಅಡೆತಡೆ ಉಂಟಾಗುವ ಸಾಧ್ಯತೆ ಹೆಚ್ಚಿದೆ. ಇನ್ನೆನೂ ಪಾಲಿಕೆ ಅಂಗಳದಲ್ಲಿ ಚುನಾಯಿತ ಪ್ರತಿನಿಧಿಗಳು ಕಾರ್ಯಪ್ರವೃತ್ತರಾಗುತ್ತಾರೆ ಎಂಬುವಷ್ಟರಲ್ಲಿಯೇ ಮತ್ತೊಂದು ವಿಷಯ ಮುನ್ನೆಲೆಗೆ ಬಂದಿದೆ.

ಮೀಸಲಾತಿ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಅವಳಿ ನಗರ ಮಹಾನಗರ ಪಾಲಿಕೆಯ ಮೇಯರ್-ಉಪ ಮೇಯರ್ ಚುನಾವಣೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮೇಯರ್-ಉಪಮೇಯರ್ ಚುನಾವಣೆ ನಡೆಸದಿರುವಂತೆ ಅರ್ಜಿದಾರರಾದ ಕಿರಣ್ ಸಾಮ್ರಾಣಿ ಹಾಗೂ ಅಲ್ತಾಫ್ ಕಿತ್ತೂರ ಆಗ್ರಹಿಸಿದ್ದಾರೆ.

ಈಗಾಗಲೇ ಮೀಸಲಾತಿ ಹಾಗೂ ವಾರ್ಡ್ ವಿಂಗಡಣೆ ಸೇರಿದಂತೆ ಚುನಾವಣೆಯೇ ಅಸಂವಿಧಾನಿಕವಾಗಿ ನಡೆದಿದ್ದು, ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿ ಇರುವಾಗಲೇ ಮೇಯರ್-ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿ ಮಾಡಿರುವುದು ಸರಿಯಲ್ಲ ಕೋರ್ಟ್ ನಲ್ಲಿ ವಿಚಾರಣೆಯಲ್ಲಿ ಇರುವಾಗಲೇ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿರುವ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಪಾಲಿಕೆ ವಾರ್ಡ್ ಗಳ ಮೀಸಲಾತಿ ಸಮರ್ಪಕವಾಗಿ ನಡೆದಿಲ್ಲ. ಈ ಸಂಬಂಧ ನ್ಯಾಯಾಲಯ ಮೊರೆ ಹೋಗಲಾಗಿತ್ತು. ಇದೇ ಕಾರಣಕ್ಕೆ ಗೋವಾದಲ್ಲಿ ಚುನಾವಣಾ ಪ್ರಕ್ರಿಯೆ ರದ್ದುಗೊಳಿಸಲಾಗಿದೆ. ಇದನ್ನೇ ಆಧಾರವಾಗಿಟ್ಟುಕೊಂಡು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಇಡೀ ಚುನಾವಣಾ ಪ್ರಕ್ರಿಯೆ ರದ್ದುಗೊಳಿಸುವಂತೆ ಮನವಿ ಮಾಡಿದ್ದೇವೆ. ಪ್ರಕರಣ ನ್ಯಾಯಾಲಯದಲ್ಲಿರುವಾಗ ಮೇಯರ್, ಉಪಮೇಯರ್ ಚುನಾವಣೆ ಘೋಷಣೆಯಾಗಿದೆ.

ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು. ಮೇ 25 ರಂದು ಮೇಲ್ಮನವಿ ಸಲ್ಲಿಸುವುದಾಗಿ ಅರ್ಜಿದಾರರು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಮೇಯರ್-ಉಪ ಮೇಯರ್ ಚುನಾವಣೆ ನಡೆಸದಿರಲು ಆಗ್ರಹಿಸಿದ್ದಾರೆ.

ಒಟ್ಟಿನಲ್ಲಿ ಚುನಾಯಿತರಾಗಿ ಮನೆಯಲ್ಲಿ ಕುಳಿತಿದ್ದ ಪಾಲಿಕೆ ಸದಸ್ಯರು ನೆಮ್ಮದಿ ನಿಟ್ಟುಸಿರು ಬಿಡುವಷ್ಟರಲ್ಲಿಯೇ ಕೋರ್ಟ್ ವಿಷಯದಿಂದ ಮತ್ತೆ ತಲೆ ಬಿಸಿಯಾಗುವಂತಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವ ಮೂಲಕ ಕೋರ್ಟ್ ನಿರ್ಧಾರವನ್ನು ಪ್ರಕಟಿಸಿ ಗೊಂದಲಕ್ಕೆ ಬ್ರೇಕ್ ಹಾಕಬೇಕಿದೆ.

Edited By : Shivu K
Kshetra Samachara

Kshetra Samachara

16/05/2022 06:57 pm

Cinque Terre

46.81 K

Cinque Terre

0

ಸಂಬಂಧಿತ ಸುದ್ದಿ