ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಕಾಂಗ್ರೆಸ್‌ನಲ್ಲಿ ಶುರುವಾಗಿದೆ ವಿನಯ್ V/s ಇಸ್ಮಾಯಿಲ್

ಧಾರವಾಡ: ಧಾರವಾಡ ಜಿಲ್ಲಾ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಗೋಚರವಾಗುತ್ತಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಧಾರವಾಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರಿದ್ದು, ಇದನ್ನೇ ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರು, ವಿನಯ್ ಕುಲಕರ್ಣಿ ವಿರುದ್ಧ ತೊಡೆ ತಟ್ಟಿದ್ದಾರೆ.

ಧಾರವಾಡ ಗ್ರಾಮಾಂತರ ಕಾಂಗ್ರೆಸ್‌ನಲ್ಲಿ ಸದ್ಯ ಎರಡು ಬಣಗಳು ಹುಟ್ಟಿಕೊಂಡಿವೆ. ಅವು ಒಂದು ಇಸ್ಮಾಯಿಲ್ ಬಣ ಮತ್ತೊಂದು ವಿನಯ್ ಬಣ. ಈ ಎರಡೂ ಬಣಗಳ ನಡುವೆ ಇದೀಗ ದೊಡ್ಡ ಸರ್ಕಸ್ ನಡೆಯುತ್ತಿದೆ. ಜನತಾದಳದಲ್ಲಿ ಗುರುತಿಸಿಕೊಂಡಿದ್ದ ಇಸ್ಮಾಯಿಲ್ ತಮಟಗಾರ ಕಾಂಗ್ರೆಸ್ ಸೇರಿ ಹುಬ್ಬಳ್ಳಿ, ಧಾರವಾಡ ಪಶ್ಚಿಮ ಕ್ಷೇತ್ರದಿಂದ ಟಿಕೆಟ್ ಕೂಡ ಪಡೆದುಕೊಂಡು, ಅರವಿಂದ ಬೆಲ್ಲದ ವಿರುದ್ಧ ಸೋಲಿನ ರುಚಿ ಅನುಭವಿಸಿದ್ದರು.

ಇದೀಗ ಇವರು ಧಾರವಾಡ ಗ್ರಾಮಾಂತರ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ಈಗಾಗಲೇ ಕ್ಷೇತ್ರದಲ್ಲಿ ತಮ್ಮ ರಾಜಕೀಯ ಚಟುವಟಿಕೆ ಆರಂಭಿಸಿದ್ದಾರೆ. ವಿನಯ್ ಅವರಿಗೆ ಜಿಲ್ಲಾ ಪ್ರವೇಶ ಸಿಗದೇ ಇದ್ದರೂ ನಾವೇ ಅವರ ಚುನಾವಣೆ ಮಾಡಿ ಗೆಲ್ಲಿಸುತ್ತೇವೆ ಎಂದು ವಿನಯ್ ಅಭಿಮಾನಿಗಳು ಪಣ ತೊಟ್ಟಿದ್ದಾರೆ. ಇದರ ಮಧ್ಯೆ ಇಸ್ಮಾಯಿಲ್ ಅವರು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷದಿಂದ ಟಿಕೆಟ್ ಸಿಗದೇ ಇದ್ದರೂ ಪಕ್ಷೇತರ ಅಭ್ಯರ್ಥಿಯಾಗಿಯಾದರೂ ಚುನಾವಣಾ ಅಖಾಡಕ್ಕೆ ಧುಮುಕುವುದು ಖಚಿತ ಎಂದು ಮೂಲಗಳು ತಿಳಿಸಿವೆ.

ಇಸ್ಮಾಯಿಲ್ ಹಾಗೂ ವಿನಯ್ ಅಭಿಮಾನಿಗಳ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಮೊನ್ನೆ ನಡೆದ ಬ್ಯಾನರ್ ಗಲಾಟೆಯೇ ಕಾರಣವಾಗಿದೆ. ಭೀಮೋತ್ಸವ ಕಾರ್ಯಕ್ರಮದಲ್ಲಿ ವಿನಯ್ ಅವರ ಭಾವಚಿತ್ರ ಹಾಕಿಸಿದ್ದಕ್ಕೆ ಇನ್ನೊಂದು ಬಣದವರು ವಿರೋಧ ವ್ಯಕ್ತಪಡಿಸಿದ್ದೇ ತಾಜಾ ಉದಾಹರಣೆಯಾಗಿದೆ. ಏನೇ ಆಗಲಿ, ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಇದೀಗ ಇಬ್ಬರು ಕಾಂಗ್ರೆಸ್ ಅಭ್ಯರ್ಥಿಗಳು ಹುಟ್ಟಿಕೊಂಡಿದ್ದು, ಒಬ್ಬರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕರೆ ಮತ್ತೊಬ್ಬರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಖಚಿತ ಎಂದು ಹೇಳಲಾಗುತ್ತಿದೆ. ಹೀಗಾದಲ್ಲಿ ಇದು ಮತ್ತೆ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಕಾಂಗ್ರೆಸ್‌ನ ರಾಜ್ಯ ನಾಯಕರು ಈ ಪ್ರಕರಣವನ್ನು ಹೇಗೆ ಇತ್ಯರ್ಥಪಡಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Edited By :
Kshetra Samachara

Kshetra Samachara

17/05/2022 11:03 am

Cinque Terre

19.87 K

Cinque Terre

9

ಸಂಬಂಧಿತ ಸುದ್ದಿ