ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೀಪಕ ಚಿಂಚೋರೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಕಾಂಗ್ರೆಸ್ ಪಕ್ಷ

ಧಾರವಾಡ: ಪಕ್ಷದ ಸಂಘಟನೆಗೆ ಧಕ್ಕೆ ತರುವ ರೀತಿಯ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಅಧ್ಯಕ್ಷರ ಸಹಿತ ವರಿಷ್ಠರ ಗಮನಕ್ಕೆ ತಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ಅವರಿಗೆ ಕಾಂಗ್ರೆಸ್ ಪಕ್ಷ ನೋಟಿಸ್ ಜಾರಿ ಮಾಡಿದೆ.

ಮೂರು ದಿನಗಳ ಹಿಂದೆ ಧಾರವಾಡದಲ್ಲಿ ನಡೆದ ಮುಸ್ಲಿಂ ಮುಖಂಡರ ಸಭೆಯಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚಿಂಚೋರೆ ಅವರು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡುವ ಪಕ್ಷದಿಂದ ಸ್ಪರ್ಧಿಸುವುದಾಗಿ ಹೇಳಿದ್ದ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ, ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ನೋಟಿಸ್ ಜಾರಿ ಮಾಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಹು-ಧಾ ಪಶ್ಚಿಮ ಕ್ಷೇತ್ರದಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯೂ ಆಗಿರುವ ಚಿಂಚೋರೆ ಅವರ ಈ ಹೇಳಿಕೆ ಇದೀಗ ಪಕ್ಷದಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದೆ. ಇನ್ನೊಂದೆಡೆ ಚಿಂಚೋರೆ ಅವರು ಮಾತನಾಡುತ್ತಿರುವ ಸಂದರ್ಭದಲ್ಲಿ ಇನ್ನೋರ್ವ ಮುಖಂಡ ಇಸ್ಮಾಯಿಲ್ ತಮಟಗಾರ ಕೂಡ ಪಕ್ಕದಲ್ಲಿಯೇ ಇದ್ದರು. ಆ ಸಂದರ್ಭದಲ್ಲಿ ಮಾತನಾಡಿದ ಚಿಂಚೋರೆ ಅವರು, ಇಬ್ಬರೂ ಹು-ಧಾ ಪಶ್ಚಿಮ ಕ್ಷೇತ್ರದಿಂದ ಕಣಕ್ಕಿಳಿಯಲು ಬಯಸಿದ್ದೇವೆ ಎನ್ನುತ್ತ ಟಿಕೆಟ್ ನೀಡಿದ ಪಕ್ಷದಿಂದ ಸ್ಪರ್ಧಿಸುವುದಾಗಿ ಹೇಳಿರುವುದು ತೀವ್ರ ಚರ್ಚೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಕಾರಣ ನೀಡುವಂತೆ ಇದೀಗ ಕಾಂಗ್ರೆಸ್ ಚಿಂಚೋರೆ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

Edited By : Nirmala Aralikatti
Kshetra Samachara

Kshetra Samachara

18/05/2022 07:19 pm

Cinque Terre

50.01 K

Cinque Terre

1

ಸಂಬಂಧಿತ ಸುದ್ದಿ