ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಬೇಕು: ವಿಪ ಮಾಜಿ ಸಭಾಪತಿ ಮತ್ತಿಕಟ್ಟಿ

ಧಾರವಾಡ: ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಆಗುವ ನಿಟ್ಟಿನಲ್ಲಿ ಸರ್ಕಾರ ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಜೊತೆಗೆ ನವೆಂಬರ್ ಒಳಗೆ ಪ್ರತ್ಯೇಕ ಪಾಲಿಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ ಆಗ್ರಹಿಸಿದರು

ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಅವಳಿ ನಗರ ಪಾಲಿಕೆಯಿಂದ ಅನುದಾನ ಹಂಚಿಕೆಯಲ್ಲಿ ಧಾರವಾಡಕ್ಕೆ ತಾರತಮ್ಯ ಆಗುತ್ತಿದೆ. ಅಭಿವೃದ್ಧಿಗೆ ಅಗತ್ಯ ಅನುದಾನ ಸಿಗದ ಕಾರಣ ನಿರೀಕ್ಷಿತ ಪ್ರಮಾಣದಲ್ಲಿ ಧಾರವಾಡ ಸೌಕರ್ಯಗಳನ್ನು ಹೊಂದಲು ಸಾಧ್ಯವಾಗುತ್ತಿಲ್ಲ. ಈ ಕಾರಣದಿಂದ ಜನರು ಪ್ರತ್ಯೇಕ ಪಾಲಿಕೆ ಬಯಸುತ್ತಿದ್ದಾರೆ. ಈ ದಿಸೆಯಲ್ಲಿ ಈಗಾಗಲೇ ಅನೇಕ ಹೋರಾಟಗಳು ಆರಂಭವಾಗಿವೆ. ತಾವು ಕೂಡ ಪ್ರತ್ಯೇಕ ಪಾಲಿಕೆ ಬೇಕು ಎಂಬ ಬೇಡಿಕೆಯ ಪರವಾಗಿದ್ದು, ಇದು ನ್ಯಾಯಸಮ್ಮತ ಕೂಡ ಎಂದರು.

ಈಗಾಗಲೇ ಸ್ಥಳೀಯ ಜನಪ್ರತಿನಿಧಗಳು ಮಾತ್ರವಲ್ಲದೇ ಮುಖ್ಯಮಂತ್ರಿಗಳಿಗೂ ಸಹ ಮನವಿ ಸಲ್ಲಿಸಲಾಗಿದೆ. ಆದ್ದರಿಂದ ಸರ್ಕಾರ ಬರುವ ನವೆಂಬರ್ ಒಳಗೆ ತೀರ್ಮಾನ ಕೈಕೊಳ್ಳಬೇಕು. ಇಲ್ಲದಿದ್ದರೆ ಈ ವಿಷಯ ತಾರ್ಕಿಕ ಅಂತ್ಯ ಕಾಣುವ ತನಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ, ಮುಖಂಡರಾದ ಡಾ. ಶರಣಪ್ಪ ಕೊಟಗಿ, ವಸಂತ ಅರ್ಕಾಚಾರ, ಪ್ರತ್ಯೇಕ ಪಾಲಿಕೆ ಹೋರಾಟ ಸಮಿತಿಯ ಮನೋಜ ಪಾಟೀಲ, ವೆಂಕಟೇಶ ಮಾಚಕನೂರ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

Edited By : Nirmala Aralikatti
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/05/2022 10:23 pm

Cinque Terre

39.57 K

Cinque Terre

4

ಸಂಬಂಧಿತ ಸುದ್ದಿ