ಹುಬ್ಬಳ್ಳಿ: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಜೆಡಿಎಸ್ ಪಕ್ಷದಿಂದ ಬಸವರಾಜ ಹೊರಟ್ಟಿ ಅವರು, ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ, ಇಂದು ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ನೇತೃತ್ವದಲ್ಲಿ ಬಸವರಾಜ ಹೊರಟ್ಟಿ ಅವರಿಗೆ ಬಿಜೆಪಿ ಶಾಲ್ ಹಾಕಿ ಬಾವುಟ ಹಾರಿಸುವುದರ ಮೂಲಕ ಅದ್ಧೂರಿಯಾಗಿ ಸ್ವಾಗತ ಕೋರಿದರು.
ಬಸವರಾಜ ಹೊರಟ್ಟಿ ಅವರು ಹುಬ್ಬಳ್ಳಿ ಬಿಜೆಪಿ ಕಚೇರಿಗೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ, ಹಲವಾರು ಬಿಜೆಪಿ ಮುಖಂಡರು ಸೇರಿಕೊಂಡು ಸನ್ಮಾನ ಮಾಡಿದರು. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೋಳಿಸೋಣ ಎಂದು ಶುಭ ಹಾರೈಸಿದರು.
Kshetra Samachara
20/05/2022 03:43 pm